ಗುರುವಾರ, ಸೆಪ್ಟೆಂಬರ್ 5, 2013

ಮನ್ನಾರು ಕೃಷ್ಣಗೆ ಮಂಗಳ


ಮನ್ನಾರು ಕೃಷ್ಣಗೆ ಮಂಗಳ
ಜಗವ ಮನ್ನಿಸಿದೊಡೆಯಗೆ ಮಂಗಳ 

ಬೊಮ್ಮನ ಪಡೆದಗೆ ಭಕ್ತರುದ್ಧಾರಿಗೆ
ಕಮ್ಮಗೋಲನಯ್ಯಗೆ ಮಂಗಳ
ಧರ್ಮರಕ್ಷಕನಿಗೆ ದಾನವಶಿಕ್ಷಗೆ
ನಮ್ಮ ರಕ್ಷಕನಿಗೆ ಮಂಗಳ 

ತುರುಗಳ ಕಾಯ್ದಗೆ ಕರುಣಾಕರನಿಗೆ
ಗಿರಿಯನೆತ್ತಿದವಗೆ ಮಂಗಳ
ವರದ ತಿಮ್ಮಪ್ಪಗೆ ವಾರಿಜನಾಭಗೆ
ಹರಿ ಸರ್ವೋತ್ತಮನಿಗೆ ಮಂಗಳ

ದೇವಕಿದೇವಿಯ ತನಯಗೆ ಮಂಗಳ
ದೇವ ತಿಮ್ಮಪ್ಪಗೆ ಮಂಗಳ
ಮಾವನ ಕೊಂದು ಮಲ್ಲರ ಮಡುಹಿದ
ಪುರಂದರವಿಠಲಗೆ ಮಂಗಳ

Tag: Mannaru Krishnage mangala

ಕಾಮೆಂಟ್‌ಗಳಿಲ್ಲ: