ಬುಧವಾರ, ಸೆಪ್ಟೆಂಬರ್ 4, 2013

ಜಯ ಮಂಗಳಂ

ಜಯ ಮಂಗಳಂ ನಿತ್ಯ ಶುಭ ಮಂಗಳಂ 

ಮುಕುಟಕ್ಕೆ ಮಂಗಳ ಮತ್ಸ್ಯವತಾರಗೆ
ಮುಖಕ್ಕೆ ಮಂಗಳ ಮುದ್ದು ಕೂರ್ಮಗೆ
ಸುಕಂಠಕೆ ಮಂಗಳ ಸೂಕರ ರೂಪಗೆ
ನಖಕ್ಕೆ ಮಂಗಳ ನರಸಿಂಹಗೆ 

ವಕ್ಷಕ್ಕೆ ಮಂಗಳ ವಟು ವಾಮನಗೆ
ಪಕ್ಷಕ್ಕೆ ಮಂಗಳ ಪರಶುರಾಮಗೆ
ಕಕ್ಷಕ್ಕೆ ಮಂಗಳ ಕಾಕುತ್ಸ್ಥರಾಮಗೆ
ಕುಕ್ಷಿಗೆ ಮಂಗಳ ಶ್ರೀಕೃಷ್ಣಗೆ 

ಊರುಗಳಿಗೆ ಮಂಗಳ ಉತ್ತಮಬೌದ್ಧಗೆ
ಚರಣಕ್ಕೆ ಮಂಗಳ ಚೆಲುವ ಕಲ್ಕಿಗೆ
ಪರಿಪರಿ ರೂಪಗೆ ಪರಮಾನಂದಗೆ
ಪುರಂದರವಿಠಲಗೆ ಜಯಮಂಗಳಂ 

ಸಾಹಿತ್ಯ: ಪುರಂದರದಾಸರು

ಕಾಮೆಂಟ್‌ಗಳಿಲ್ಲ: