ಶನಿವಾರ, ಸೆಪ್ಟೆಂಬರ್ 7, 2013

ಬಾರೆ ಬಾರೆ ಚೆಂದದ ಚೆಲುವಿನ ತಾರೆ

ಬಾರೆ ಬಾರೆ ಚೆಂದದ ಚೆಲುವಿನ ತಾರೆ
ಬಾರೆ ಬಾರೆ ಒಲವಿನ ಚಿಲುಮೆಯ ಧಾರೆ

ಕಣ್ಣಿನ ಸನ್ನೆಯ ಸ್ವಾಗತ ಮರೆಯಲಾರೆ
ಚೆಂದುಟಿ ಮೇಲಿನ ಹೂನಗೆ ಮರೆಯಲಾರೆ
ಅಂದದ ಹೆಣ್ಣಿನ ನಾಚಿಕೆ ಮರೆಯಲಾರೆ
ಮೌನ ಗೌರಿಯ ಮೋಹದ ಕೈ ಬಿಡಲಾರೆ
ಬಾರೇ, ಬಾರೇ, ಚೆಂದದ ಚೆಲುವಿನ ತಾರೆ
ಒಲವಿನ ಚಿಲುಮೆಯ ಧಾರೆ

ಕೈಬಳೆ ನಾದದ ಗುಂಗನು ಅಳಿಸಲಾರೆ
ಮೈಮನ ಸೋಲುವ ಮತ್ತನು ಮರೆಯಲಾರೆ
ರೂಪಸಿ ರಂಭೆಯ ಸಂಗವ ತೊರೆಯಲಾರೆ
ಮೌನ ಗೌರಿಯ ಮೋಹದ ಕೈ ಬಿಡಲಾರೆ
ಬಾರೇ, ಬಾರೇ, ಚೆಂದದ ಚೆಲುವಿನ ತಾರೆ
ಒಲವಿನ ಚಿಲುಮೆಯ ಧಾರೆ

ಚಿತ್ರ: ನಾಗರಹಾವು
ಸಾಹಿತ್ಯ: ವಿಜಯನಾರಸಿಂಹ
ಸಂಗೀತ: ವಿಜಯಭಾಸ್ಕರ್
ಗಾಯನ: ಪಿ. ಬಿ. ಶ್ರೀನಿವಾಸ್


Tag: Baare baare chandada cheluvina taare

ಕಾಮೆಂಟ್‌ಗಳಿಲ್ಲ: