ಶುಕ್ರವಾರ, ಸೆಪ್ಟೆಂಬರ್ 6, 2013

ಅನಿಸುತಿದೆ ಯಾಕೋ ಇಂದು

ಅನಿಸುತಿದೆ ಯಾಕೋ ಇಂದು
ನೀನೇನೆ ನನ್ನವಳೆಂದು
ಮಾಯದ ಲೋಕದಿಂದ
ನನಗಾಗೆ ಬಂದವಳೆಂದು
ಆಹಾ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನಾ....
ಹಾಗೇ ಸುಮ್ಮನೇ......

ಸುರಿಯುವ ಸೋನೆಯು
ಸೂಸಿತು ನಿನ್ನದೇ ಪರಿಮಳ
ಇನ್ಯಾರ ಕನಸಲೂ ನೀನು
ಹೋದರೆ ತಳಮಳ
ಪೂರ್ಣ ಚಂದಿರ ರಜಾ ಹಾಕಿದ
ನಿನ್ನಯ ಮೊಗವನು ಕಂಡ ಕ್ಷಣ
ನಾ ಖೈದಿ ನೀನೇ ಸೆರೆಮನೆ
ತಬ್ಬಿ ನನ್ನ ಅಪ್ಪಿಕೋ ಒಮ್ಮೆ
ಹಾಗೇ ಸುಮ್ಮನೆ....
ಅನಿಸುತಿದೆ ಯಾಕೋ ಇಂದು.....

ತುಟಿಗಳ ಹೂವಲಿ
ಆಡದ ಮಾತಿನ ಸಿಹಿಯಿದೆ
ಮನಸಿನ ಪುಟದಲಿ
ಕೇವಲ ನಿನ್ನದೇ ಸಹಿಯಿದೆ
ಹಣೆಯಲಿ ಬರೆಯದ ನಿನ್ನ ಹೆಸರ
ಹೃದಯದಿ ನಾನೇ ಕೊರೆದಿರುವೆ
ನಿನಗುಂಟೆ ಇದರ ಕಲ್ಪನೆ
ನನ್ನ ಹೆಸರ ಕೂಗೆ ಒಮ್ಮೆ
ಹಾಗೇ ಸುಮ್ಮನೆ.....
ಅನಿಸುತಿದೆ ಯಾಕೋ ಇಂದು
ನೀನೇನೆ ನನ್ನವಳೆಂದು
ಮಾಯದ ಲೋಕದಿಂದ
ನನಗಾಗೆ ಬಂದವಳೆಂದು
ಆಹಾ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನಾ....
ಹಾಗೇ ಸುಮ್ಮನೇ......

ಚಿತ್ರ: ಮುಂಗಾರುಮಳೆ
ಸಾಹಿತ್ಯ: ಜಯಂತ್ ಕಾಯ್ಕಿಣಿ
ಸಂಗೀತ: ಮನೋಮೂರ್ತಿ
ಗಾಯನ: ಸೋನು ನಿಗಮ್

Tag: anisutide yako indu

ಕಾಮೆಂಟ್‌ಗಳಿಲ್ಲ: