ಬುಧವಾರ, ಸೆಪ್ಟೆಂಬರ್ 4, 2013

ಜಯತು ಕೋದಂಡರಾಮ


ಜಯತು ಕೋದಂಡರಾಮ ಜಯತು ದಶರಥರಾಮ
ಜಯತು ಸೀತಾರಾಮ ಜಯತು ರಘುರಾಮ ಜಯತು ಜಯತು

ತಮದೈತ್ಯನನು ಮಡುಹಿ ಮಂದರಾಚಲ ನೆಗಹಿ
ಪ್ರೀತಿಯಿಂದಲಿ ತಂದು ಸಕಲ ಭೂತಳವ
ಕ್ಷೇತ್ರದಿಂದುದ್ಭವಿಸಿ ಮೊರೆಯಿಡುವ ಬಾಲಕನ
ಭೀತಿಯನು ಬಿಡಿಸಿ ನೆರೆಕಾಯ್ದ ರಘುರಾಮ 

ಬಲಿಯೊಳ್ ದಾನವ ಮಾಡಿ ನೆಲನ ಈರಡಿ ಮಾಡಿ
ಛಲದಿಂದ ಕ್ಷತ್ರಿಯರ ಕುಲವ ಹೋಗಾಡಿ
ಲಲನೆಗೋಸುಗ ಬಂದ ನೆವದಿಂದ ರಾವಣನ
ತಲೆಗಳನು ಚೆಂಡಾದಿ ಮೆರೆದ ರಘುರಾಮ

ವಸುದೇವಸುತನೆನಿಸಿ ವನಿತೆಯರ ವ್ರತಗೆಡಿಸಿ
ಎಸೆವ ತುರಗವನೇರಿ ಮಲ್ಲರನು ಸವರಿ
ವಸುಧೆಯೊಳು ಪುರಂದರವಿಠಲ ನೀ ಪಾಲಿಸೈ
ಬಿಸಜಾಕ್ಷಯೋಧ್ಯಪುರವಾಸ ರಘುರಾಮ 

ಸಾಹಿತ್ಯ: ಪುರಂದರದಾಸರು

Tag: Jayatu kodanda Rama

ಕಾಮೆಂಟ್‌ಗಳಿಲ್ಲ: