ಮಂಗಳವಾರ, ಸೆಪ್ಟೆಂಬರ್ 3, 2013

ಹಣ್ಣು ಮಾರುವವನ ಹಾಡು


ನಂಜನಗೂಡಿನ ರಸಬಾಳೆ
ತಂದಿಹೆ ಕೊಡಗಿನ ಕಿತ್ತಳೆ
ಬೀದರ ಜಿಲ್ಲೆಯ ಸೀಬೆಯ ಹಣ್ಣು
ಬೆಂಗಳೂರಿನ ಸೇಬಿನ ಹಣ್ಣು

ಕೊಳ್ಳಿರಿ ಹಿಗ್ಗನು ಹರಿಸುವವು
ಕಲ್ಲುಸಕ್ಕರೆಯ ಮರೆಸುವವು

ಕೊಳ್ಳಿರಿ ಮಧುಗಿರಿ ದಾಳಿಂಬೆ
ಬೆಳವಲ ಬಯಲಿನ ಸಿಹಿಲಿಂಬೆ
ಬೆಳಗಾವಿಯ ಸವಿ ಸಪೋಟ
ದೇವನಹಳ್ಳಿಯ ಚಕ್ಕೋತ

ನಾಲಿಗೆ ಬರವನು ಕಳೆಯುವವು
ದೇಹದ ಬಲವನು ಬೆಳೆಸುವವು

ಗಂಜಾಮ್ ಅಂಜೀರ್
ತುಮಕೂರ್ ಹಲಸು
ಧಾರವಾಡದ ಆಪೂಸು
ಮಲೆನಾಡಿನ ಅನಾನಸು

ಸವಿಯಿರಿ ಬಗೆಬಗೆ ಹಣ್ಣುಗಳ
ಕನ್ನಡ ನಾಡಿನ ಹಣ್ಣುಗಳ

ಸಾಹಿತ್ಯ: ಕಾವ್ಯಾನಂದ (ಡಾ. ಸಿದ್ಧಯ್ಯ ಪುರಾಣಿಕ)


Tag: Hannu Maruvavana Haadu. Nanjanagudina Rasabaale

ಕಾಮೆಂಟ್‌ಗಳಿಲ್ಲ: