ಶುಕ್ರವಾರ, ಸೆಪ್ಟೆಂಬರ್ 6, 2013

ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ

ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ, ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ, ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು..

ಭೂರಮೆಯೆ ಆಧಾರ ಈ ಕಲೆಯೆ ಸಿಂಗಾರ
ಬಂಗಾರ ತೇರೇರಿ ಮೂಡಣವೆ ಸಿಂಧೂರ
ದಿನ ದಿನ ದಿನ ಹೊಸದಾಗಿದೆ
ಇಂದಿಗೂ ಜೀವಂತ ಶಿಲೆಯೊಳಗೆ ಸಂಗೀತ
ಸ್ವರ ಸ್ವರದಲಿ ಏರಿಳಿತ ತುಂಗೆಯಲಿ ಶ್ರಿಮಂತ
ಕಣ ಕಣ ಕಣ ಕರೆ ನೀಡಿದೆ
ನೀನೊಮ್ಮೆ ಬಂದಿಲ್ಲಿ ಹಿತವಾಗಿ ಹಾಡು 
ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ, ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ, ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು..

ಗಾಳಿಯೆ ಆದೇಶ ಮೇಘವೆ ಸಂದೇಶ
ಪ್ರೇಮಕೆ ಸಂಕೇತ ಹೊಂಬಣ್ಣದಾಕಾಶ
ಋತು ಋತುಗಳು ನಿನ್ನ ಕಾದಿದೆ
ನೀನಿರೆ ರಂಗೋಲಿ ಸಂಗಾತಿ ಸುವ್ವಾಲಿ
ನವರಸವು ಮೈತಾಳಿ ಜೀವನದ ಜೋಕಾಲಿ
ಯುಗ ಯುಗಗಳು ನಿನ್ನ ಕಾಯುವೆ
ನೀನೊಮ್ಮೆ ಬಂದಿಲ್ಲಿ ಬೆಳಕನ್ನು ನೀಡು
ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ, ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ, ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು..

ಚಿತ್ರ: ಬೆಳ್ಳಿ ಕಾಲುಂಗುರ
ಸಾಹಿತ್ಯ: ದೊಡ್ಡ ರಂಗೇಗೌಡ
ಸಂಗೀತ  ಹಂಸಲೇಖ
ಗಾಯನ: ಚಿತ್ರಾ
Tag: Kelisade kallu kallinali kannada nudiಕಾಮೆಂಟ್‌ಗಳಿಲ್ಲ: