ಭಾನುವಾರ, ಸೆಪ್ಟೆಂಬರ್ 8, 2013

ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ
ಎಲ್ಲಿಲ್ಲಿ ನೋಡಿದರೂ ಅಲ್ಲಿ ಶ್ರೀರಾಮ

ರಾವಣನ ಮೂಲಬಲ ಕಂಡು ಕಪಿಸೇನೆ
ಆವಾಗಲೇ ಬೆದರಿ ಓಡಿದವು
ಈ ವೇಳೆ ನರನಾಗಿ ಇರಬಾರದೆಂದೆಣಿಸಿ
ದೇವ ರಾಮಚಂದ್ರ ಜಗವೆಲ್ಲಾ ತಾನಾದ

ಅವನಿಗೆ ಇವ ರಾಮ ಇವನಿಗೆ ಅವ ರಾಮ
ಅವನಿಯೊಳೀಪರಿ ರೂಪವುಂಟೇ
ಲವಮಾತ್ರದೀ ಅಸುರ ದುರುಳರೆಲ್ಲರು
ಅವರವರೆ ಹೊಡೆದಾಡಿ ಹತರಾಗಿಹೋದರು

ಹನುಮದಾದಿ ಸಾಧು ಜನರು ಅಪ್ಪಿಕೊಂಡು
ಕುಣಿಕುಣಿದಾಡಿದರು ಹರುಷದಿಂದ
ಕ್ಷಣದಲ್ಲಿ ಪುರಂದರ ವಿಠಲರಾಯನು
ಕೊನೆಗೊಡೆಯನು ತಾನೊಬ್ಬನಾಗಿ ನಿಂತ

ಸಾಹಿತ್ಯ: ಪುರಂದರದಾಸರು
ಗಾಯನ: ಡಾ. ನಾಗವಲ್ಲಿ ನಾಗರಾಜ್


Tag: Alli nodalu rama illi nodalu rama

ಕಾಮೆಂಟ್‌ಗಳಿಲ್ಲ: