ಮಂಗಳವಾರ, ಸೆಪ್ಟೆಂಬರ್ 3, 2013

ನೀನಿಲ್ಲದೆ ನನಗೇನಿದೆ

ನೀನಿಲ್ಲದೆ ನನಗೇನಿದೆ

ನೀನಿಲ್ಲದೆ ನನಗೇನಿದೆ
ಮನಸೆಲ್ಲಾ ನಿನ್ನಲ್ಲೆ ನೆಲೆಯಾಗಿದೆ
ಕನಸೆಲ್ಲಾ ಕಣ್ಣಲ್ಲೆ ಸೆಲೆಯಾಗಿದೆ

ನಿನಗಾಗಿ ಕಾದು ಕಾದು ಪರಿತಪಿಸಿ ನೊಂದೆ ನಾನು
ಕಹಿಯಾದ ವಿರಹದ ನೋವು ಹಗಲಿರುಳು ತಂದೆ ನೀನು
ಎದೆಯಾಸೆ ಏನು ಎಂದು ನೀ ಕಾಣದಾದೆ
ನಿಶೆಯೊಂದೆ ನನ್ನಲ್ಲಿ ನೀ ತುಂಬಿದೆ
ಬೆಳಕೊಂದೆ ನಿನ್ನಿಂದ ನಾ ಬಯಸಿದೆ

ಒಲವೆಂಬ ಕಿರಣ ಬೀರಿ ಒಳಗಿರುವ ಕಣ್ಣ ತೆರೆಸಿ
ಒಣಗಿರುವ ಎದೆ ನೆಲದಲ್ಲಿ ಭರವಸೆಯ ಜೀವ ಹರಿಸಿ
ಸೆರೆಯಿಂದ ಬಿಡಿಸಿ ನನ್ನ ಆತಂಕ ನೀಗು
ಹೊಸ ಜೀವ ನಿನ್ನಿಂದ ನಾ ತಾಳುವೆ
ಹೊಸ ಲೋಕ ನಿನ್ನಿಂದ ನಾ ಕಾಣುವೆ


ಸಾಹಿತ್ಯ: ಎಂ. ಎನ್. ವ್ಯಾಸರಾವ್
Photo courtesy: bestmodernpaintings.blogspot.com

Tag: Neenillade nanagenide

ಕಾಮೆಂಟ್‌ಗಳಿಲ್ಲ: