ಬುಧವಾರ, ಸೆಪ್ಟೆಂಬರ್ 4, 2013


ನಾ ನಿನ್ನೊಳನ್ಯ ಬೇಡುವುದಿಲ್ಲ - ಎನ್ನ 
ಹೃದಯಕಮಲದೊಳು ನೆಲೆಸಿರು ಹರಿಯೆ

ಶಿರ ನಿನ್ನ ಚರಣಕ್ಕೆರಗಲಿ ಚಕ್ಷು 
ಎರಕದಿಂದಲಿ ನಿನ್ನ ನೋಡಲಿ ಹರಿಯೆ 
ಕರಣ ಗೀತಂಗಳ ಕೇಳಲಿ ನಾಸಿಕ 
ನಿರ್ಮಾಲ್ಯಾನುದಿನ ಘ್ರಾಣಿಸಲಿ ಹರಿಯೆ

ನಾಲಿಗೆ ನಿನ್ನ ಕೊಂಡಾಡಲಿ ಎನ್ನ 
ತೋಳು ಕರಂಗಳ ಮುಗಿಯಲಿ ಹರಿಯೆ 
ಕಾಲು ತೀರ್ಥಯಾತ್ರೆಗೆ ಪೋಗಲಿ ಮನ 
ಬಲ್ಪಿನಿಂದಲಿ ನಿನ್ನ ಸ್ಮರಿಸಲಿ ಹರಿಯೆ

ಚಿತ್ತ ನಿನ್ನೊಳು ಮುಳುಗಾಡಲಿ ನಿನ್ನ 
ಭಕ್ತ ಜನರ ಸಂಗ ದೊರಕಲಿ ಹರಿಯೆ
ವೃತ್ತಿ ತತ್ವಯೋಗಾಭ್ಯಾಸಕ್ಕಾಗಲಿ ರಂಗ-
ವಿಠಲ ನಿನ್ನ ದಯವಾಗಲಿ ಹರಿಯೆ

ಸಾಹಿತ್ಯ: ಶ್ರೀಪಾದರಾಜರು

Tag: Naa ninnolanya beduvudilla

ಕಾಮೆಂಟ್‌ಗಳಿಲ್ಲ: