ಮಂಗಳವಾರ, ಸೆಪ್ಟೆಂಬರ್ 3, 2013

ಮೌಲಾನಾ ಅಬ್ದುಲ್ ಕಲಾಂ ಅಜಾದ್

ಮೌಲಾನಾ ಅಬ್ದುಲ್ ಕಲಾಂ ಅಜಾದ್

ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಾತ್ಮಗಾಂಧಿಯವರ ಜೊತೆಗಾರರಾಗಿದ್ದ ಪ್ರಮುಖರಲ್ಲಿ ಮೌಲಾನಾ ಅಬ್ಬುಲ್ ಕಲಾಂ  ಒಬ್ಬರು.  ಅವರು ಜನಿಸಿದ್ದು ನವೆಂಬರ್ 11, 1888ರಲ್ಲಿ.  ಉರ್ದು ವಿದ್ವಾಂಸರಾಗಿದ್ದ ಅವರು ತಮ್ಮ ಬರವಣಿಗೆಗಾಗಿ ಆಜಾದ್ಎಂಬ ನಾಮಾಂಕಿತವನ್ನು ಬಳಸುತ್ತಿದ್ದರು.  ಹೀಗಾಗಿ ಅವರು ಮೌಲಾನಾ ಆಜಾದ್ ಎಂದೇ ಪ್ರಸಿದ್ದರು.

ಪತ್ರಕರ್ತರಾಗಿ ಬ್ರಿಟಿಷ್ ಆಡಳಿತ ವಿರುದ್ಧ ಬರೆಯುತ್ತಿದ್ದ ಲೇಖನಗಳಿಂದ ಮೌಲಾನಾ ಆಜಾದರು ಪ್ರಸಿದ್ಧಿ ಪಡೆದಿದ್ದರು.  ಖಿಲಾಫತ್ ಚಳುವಳಿಯ ನೇತೃತ್ವ ವಹಿಸಿದ್ದ ಆಜಾದರು ಮಹಾತ್ಮ ಗಾಂಧೀಜಿಯವರ ನಿಕಟವರ್ತಿಗಳಾದರು.  ಮಹಾತ್ಮರು ಆಯೋಜಿಸಿದ್ದ ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ ಎಂದು ಹೆಸರಾದರು.  ಗಾಂಧೀಜಿಯವರ ಸ್ವದೇಶಿ’, ‘ಸ್ವರಾಜ್ಚಿಂತನೆಗಳಿಗೆ ಮಾರು ಹೋಗಿ ಅವರ ಜೊತೆ ನಿರಂತರವಾಗಿದ್ದ ಅಬ್ದುಲ್ ಕಲಾಂ  1923ರ ವರ್ಷದಲ್ಲಿ ತಮ್ಮ 35ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಅತ್ಯಂತ ಕಿರು ವಯಸ್ಸಿನವರಾಗಿದ್ದರು. 

1931ರ ವರ್ಷದಲ್ಲಿ ದರ್ಶನ ಸತ್ಯಾಗ್ರಹದ ಪ್ರಮುಖ ಆಯೋಜಕರಾಗಿದ್ದ ಮೌಲಾನ ಹಲವಾರು ಕಠಿಣ ಸೆರೆವಾಸಗಳನ್ನು ಕಂಡರು.  ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ಮೂರು ವರ್ಷಗಳ ಕಾಲ ಸತತವಾಗಿ ಸೆರೆಯಲ್ಲಿಯೇ ಇದ್ದರು.  ಸ್ವಾತಂತ್ರ್ಯದ ಸಮಯದಲ್ಲಿ ದೇಶದ ವಿಭಜನೆಯ ಕೂಗನ್ನು ಬೆಂಬಲಿಸದಿದ್ದ ಅವರು ಭಾರತದ ಪರವಾಗಿಯೇ ಇದ್ದರು.  ಸ್ವಾತಂತ್ರ್ಯಕ್ಕೆ ಮುಂಚೆಯೇ, ಪಾಕಿಸ್ತಾನ ರಾಷ್ಟ್ರವಾದರೆ ಅಲ್ಲಿ ಪ್ರಜಾಪ್ರಭುತ್ವ ನಿರ್ಮಾಣವಾಗದೆ ಮಿಲಿಟರಿ ಆಡಳಿತವೇ ಗತಿಯಾಗುತ್ತದೆ ಎಂಬ ಎಚ್ಚರಿಕೆ ಸಹಾ ನೀಡಿದ್ದರು.


ಸ್ವತಂತ್ರ ಭಾರತದಲ್ಲಿ ಶಿಕ್ಷಣ ಸಚಿವರಾಗಿದ್ದ ಅಬ್ದುಲ್ ಕಲಾಂ ಅವರು ಹುಟ್ಟಿದ ಈ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನ ಎಂದು ಆಚರಣೆಗೆ ತರಲಾಗಿದೆ.  ಮೌಲಾನಾ ಅಬ್ದುಲ್ ಕಲಾಂ ಅವರು ಫೆಬ್ರವರಿ 22, 1958ರ ವರ್ಷದಲ್ಲಿ ನಿಧನರಾದರು.  ಸ್ವಾತಂತ್ರ್ಯ ಚಳುವಳಿಯಲ್ಲಿ ಕ್ರಿಯಾಶೀಲರಾಗಿದ್ದ ಈ ಮಹಾನ್  ಚೇತನಕ್ಕೆ ನಮ್ಮ ಗೌರವಗಳು.

Tag: Maulana Abdul Kalam Azad

ಕಾಮೆಂಟ್‌ಗಳಿಲ್ಲ: