ಮಂಗಳವಾರ, ಡಿಸೆಂಬರ್ 10, 2013

ನಮ್ಮಮ್ಮ ಶಾರದೆ ಉಮಾಮಹೇಶ್ವರಿ


ನಮ್ಮಮ್ಮ ಶಾರದೆ ಉಮಾಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ
ಕಮ್ಮಗೋಲನ ವೈರಿಸುತನಾದ ಸೊಂಡಿಲ ಹೆಮ್ಮೈಯ ಗಣನಾಥನೆ

ಮೋರೆಕಪ್ಪಿನ ಭಾವ ಮೊರದಗಲ ಕಿವಿ ಕೋರೆದಾಡೆಯವನ್ಯಾರಮ್ಮ
ಮೂರು ಕಣ್ಣನ ಸುತ ಮುರಿದಿಟ್ಟ ಚಂದ್ರನ
ಧೀರ ಗಣನಾಥನೆ ಅಮ್ಮಯ್ಯ

ಉಟ್ಟದಟ್ಟಿಯು ಬಿಗಿದುಟ್ಟ ಚಲ್ಲಣದ ದಿಟ್ಟ ತಾನಿವನ್ಯಾರಮ್ಮ
ಶಿವನ ಪಟ್ಟದ ರಾಣಿ ಪಾರ್ವತಿಯ ಕುಮಾರನು
ಹೊಟ್ಟೆಯ ಗಣನಾಥನೆ ಅಮ್ಮಯ್ಯ

ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ ಭಾಷಿಗನಿವನ್ಯಾರಮ್ಮ
ಲೇಸಾಗಿ ಸುಜನರ ಸಲಹುವ ನೆಲೆಯಾದಿ ಕೇಶವನ ದಾಸ ಕಾಣೆ ಅಮ್ಮಯ್ಯ

ಸಾಹಿತ್ಯ: ಕನಕದಾಸರು
 Tag: Nammamma Sharadeಕಾಮೆಂಟ್‌ಗಳಿಲ್ಲ: