ಶನಿವಾರ, ಮಾರ್ಚ್ 28, 2015

ರಾಮ ಎಂಬುವ ಎರಡು ಅಕ್ಷರದ ಮಹಿಮೆಯನು


ರಾಮ ಎಂಬುವ ಎರಡು ಅಕ್ಷರದ ಮಹಿಮೆಯನು
ಪಾಮರರು ತಾವೇನು ಬಲ್ಲರಯ್ಯ

ರಾ ಎಂದ ಮಾತ್ರದೊಳು ರಕ್ತ ಮಾಂಸದೊಳಿದ್ದ
ಆಯಸ್ಥಿತಗತವಾದ ಅತಿ ಪಾಪವನ್ನು
ಮಾಯವನು ಮಾಡಿ ಮಹರಾಯ ಮುಕ್ತಿಯ ಕೊಡುವ
ದಾಯವನು ವಾಲ್ಮೀಕಿ ಮುನಿರಾಯ ಬಲ್ಲ

ಮತ್ತೆ ಮಾ ಎಂದೆನಲು ಹೊರಬಿದ್ದ ಪಾಪಗಳು
ಒತ್ತಿ ಒಳ ಪೊಗದಂತೆ ಕವಾಟವಾಗಿ
ಚಿತ್ತ ಕಾಯಗಳ ಪವಿತ್ರ ಮಾಡುವ ಪರಿಯ
ಭಕ್ತವರ ಹನುಮಂತನೊಬ್ಬ ತಾ ಬಲ್ಲ

ಧರೆಯೊಳೀ ನಾಮಕ್ಕೆ ಸರಿಮಿಗಿಲು ಇಲ್ಲೆಂದು
ಪರಮ ವೇದಗಳೆಲ್ಲ ಪೊಗಳುತಿಹವು
ಸಿರಿಯರಸ ಶ್ರೀಪುರಂದರವಿಠಲನ ನಾಮವನು
ಸಿರಿ ಕಾಶಿಯೊಳಗಿಪ್ಪ ಶಿವನು ತಾ ಬಲ್ಲ


ಸಾಹಿತ್ಯ: ಪುರಂದರದಾಸರು

Tag: Rama embuva eradu aksharada mahimeyanu

ಕಾಮೆಂಟ್‌ಗಳಿಲ್ಲ: