ಭಾನುವಾರ, ನವೆಂಬರ್ 8, 2015

ಕವಿರಾಜ ಮಾರ್ಗದಲ್ಲಿ ಕನ್ನಡ ನಾಡಿನ ಬಣ್ಣನೆ'ಕವಿರಾಜ ಮಾರ್ಗದಲ್ಲಿ ಕನ್ನಡ ನಾಡಿನ ಬಣ್ಣನೆ
-ಶ್ರೀವಿಜಯ (ಕ್ರಿ.ಶ. 877)

ಕಾವೇರಿಯಿಂದಮಾ ಗೋ
ದಾವರಿವರಮಿರ್ಪ ನಾಡದಾ ಕನ್ನಡದೊಳ್
ಭಾವಿಸಿದ ಜನಪದಂ ವಸು
ಧಾವಳಯ ವಿಲೀನ ವಿಶದ ವಿಷಯ ವಿಶೇಷಂ

ಪದನರಿದು ನುಡಿಯಲುಂ ನುಡಿ
ದುವನರಿದಾರಯಲುಮಾರ್ಪರಾ ನಾಡವರ್ಗಳ್
ಚದುರರ್ ನಿಜದಿಂ ಕುರಿತೋ
ದದೆಯುಂ ಕಾವ್ಯ ಪ್ರಯೋಗ ಪರಿಣತ ಮತಿಗಳ್

ಕಸವರಮೆಂಬುದು ನೆರೆ ಸೈ
ರಿಸಲಾರ್ಪೊಡೆ ಪರ ವಿಚಾರಮುಂ ಧರ್ಮಮುಮಂ
ಕಸವೇಂ ಕಸವರಮೇನು
ಬ್ಬಸಮಂ ಬಸಮಲ್ಲದಿರ್ದು ಮಾಡುವರೆಲ್ಲಂ

Tag: Kaviraja Maarga

ಕಾಮೆಂಟ್‌ಗಳಿಲ್ಲ: