ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ

ತಿಲಕ ಇಟ್ಟರೆ ಸ್ವರಗವು ಸಿಗದು
ವಿಭೂತಿ ಬಳಿದರೆ ಕೈಲಾಸ ಬರದು
ಇಟ್ಟ ಗಂಧಾ ಬೂದಿ ನಾಮ
ಚಟ್ಟ ಗಟ್ಟಲು ನಿರನಾಮಾ
ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ

ಶೈವರಿಗೆಲ್ಲಾ ಶಿವದೊಡ್ಡೋನು
ವೈಷ್ಣವರಿಗೆ ಹರಿ ಸರ್ವೋತ್ತಮನು
ಉತ್ತಮ ಮಧ್ಯಮ ಅಧಮರೆಲ್ಲರು
ಸತ್ತಮೇಲೆ ಸಮರಾಗ್ತಾರೊ
ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ

ತಲೆಗೊಂದು ರೀತಿ ನೀತಿಯ ಜಾತಿಯ
ಹೇಳುವ ಜ್ಯೋತಿಷಿ ಇದ್ದರು ಗುರುಗಳು
ಮಸಣದಲ್ಲಿ ಈ ವೀರಬಾಹುವ
ಕೈಯ ಮೇಲ್ಗಡೆ ಬೂದಿಯಾಗ್ತರೊ
ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ

ಸಾಹಿತ್ಯ: ಹುಣಸೂರು ಕೃಷ್ಣಮೂರ್ತಿ. 
ಸಂಗೀತ: ಪೆಂಡ್ಯಾಲ
ಗಾಯನ: ಘಂಟಸಾಲ


Tag: Kuladalli keelyavudo hucchappa

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!
Emotions
Copy and paste emojis inside comment box

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ