ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಸದಾ ಎನ್ನ ಹೃದಯದಲ್ಲಿ


ಸದಾ ಎನ್ನ ಹೃದಯದಲ್ಲಿ ವಾಸಮಾಡೋ ಶ್ರೀಹರಿ
ನಾದ ಮೂರ್ತಿ ನಿನ್ನ ಪಾದ ಮೋದದಿಂದ ಭಜಿಸುವೆ

ಜ್ಞಾನವೆಂಬೊ ನವರತ್ನದ ಮಂಟಪದ ಮಧ್ಯದಲ್ಲಿ
ಗಾನಲೋಲನ ಕುಳ್ಳಿರಿಸಿ ಧ್ಯಾನದಿಂದ ಭಜಿಸುವೆ

ಭಕ್ತಿರಸವೆಂಬ ಮುತ್ತು ಮಾಣಿಕ್ಯದ ಹರಿವಾಣದಿ
ಮುಕ್ತನಾಗಬೇಕುಯೆಂದು ಮುತ್ತಿನಾರತಿಯೆತ್ತುವೆ

ನಿನ್ನನಾನು ಬಿಡುವನಲ್ಲ ಎನ್ನ ನೀನು ಬಿಡಲು ಸಲ್ಲ
ಘನ್ನ ಮಹಿಮ ವಿಜಯವಿಠಲ ಕೇಳೋ ನಿನ್ನ ಭಕ್ತರ ಸೊಲ್ಲ

ಸಾಹಿತ್ಯ: ವಿಜಯದಾಸರು

Tag: Sadaa enna hrudayadalli

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ