ನೀನ್ಯಾಕೋ ನಿನ್ನ ಹಂಗ್ಯಾಕೋ
ನೀನ್ಯಾಕೋ ನಿನ್ನ ಹಂಗ್ಯಾಕೋ
ನಿನ್ನ ನಾಮದ ಬಲವೊಂದಿದ್ದರೆ ಸಾಕೋ.
ಆ ಮರ ಈ ಮರ ಧ್ಯಾನಿಸುತಿರುವಾಗ
ರಾಮ ರಾಮ ಎಂಬ ನಾಮವೆ ಕಾಯ್ತೋ.
ಯಮನ ದೂತರು ಬಂದು ಅಜಮಿಳನೆಳೆವಾಗ
ನಾರಾಯಣ ಎಂಬೋ ನಾಮವೆ ಕಾಯ್ತೋ.
ಕರಿ ಮಕರಿಗೆ ಸಿಲುಕಿ ಮೊರೆಯಿಡುತಿರುವಾಗ
ಆದಿಮೂಲ ಎಂಬೋ ನಾಮವೆ ಕಾಯ್ತೋ.
ಪ್ರಹ್ಲಾದನ ಪಿತ ಬಾಧಿಸುತಿರುವಾಗ
ನಾರಸಿಂಹ ಎಂಬೋ ನಾಮವೆ ಕಾಯ್ತೋ.
ಬಾಲೆಯ ಸಭೆಯಲ್ಲಿ ಸೀರೆಯ ಸೆಳೆವಾಗ
ಕೃಷ್ಣ ಕೃಷ್ಣ ಎಂಬೋ ನಾಮವೆ ಕಾಯ್ತೋ.
ನಿನ್ನ ನಾಮಕೆ ಸರಿ ಕಾಣೆನೋ ಜಗದಲಿ
ಘನ್ನ ಮಹಿಮ ಶ್ರೀ ಪುರಂದರ ವಿಠ್ಠಲ.
ಸಾಹಿತ್ಯ: ಪುರಂದರದಾಸರು
Tag: Neenyako Ninna Hangyaako
ಕಾಮೆಂಟ್‌ಗಳು