ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಈ ಪರಿಯ ಸೊಬಗು


ಈ ಪರಿಯ ಸೊಬಗು ಇನ್ನಾವ ದೇವರಲಿ ಕಾಣೆ 
ಗೋಪೀಜನಪ್ರೀಯ ಗೋಪಾಲಗಲ್ಲದೆ 

ದೊರೆಯತನದಲಿ ನೋಡೆ ಧರಣಿದೇವಿಗೆ ರಮಣ
ಸಿರಿಯತನದಲಿ ನೋಡೆ ಶ್ರೀಕಾಂತನು
ಹಿರಿಯತನದಲಿ ನೋಡೆ ಸರಸಿಜೋದ್ಭವನಯ್ಯ
ಗುರುವುತನದಲಿ ನೋಡೆ ಜಗದಾದಿ ಗುರುವು|

ಪಾವನತ್ವದಿ ನೋಡೆ ಅಮರಗಂಗಾಜನಕ
ದೇವತ್ವದಲಿ ನೋಡೆ ದಿವಿಜರೊಡೆಯ
ಲಾವಣ್ಯದಲಿ ನೋಡೆ ಲೋಕಮೋಹಕನಯ್ಯ
ಆವ ಧೈರ್ಯದಿ ನೋಡೆ ಅಸುರಾಂತಕ|

ಗಗನದಲಿ ಸಂಚರಿಪ ಗರುಡದೇವನೆ ತುರಗ
ಜಗತೀಧರ ಶೇಷ ಪರಿಯಂಕಶಯನ
ನಿಗಮಗೋಚರ ಪುರಂದರವಿಠಲಗಲ್ಲದೆ
ಮಿಗಿಲಾದ ದೈವಗಳಿಗೀ ಭಾಗ್ಯವುಂಟೇ

ಸಾಹಿತ್ಯ: ಪುರಂದರದಾಸರು



Tag: Ee pariya sobagu


ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ