ಗುಮ್ಮನ ಕರೆಯದಿರೆ
ಗುಮ್ಮನ ಕರೆಯದಿರೆ ಅಮ್ಮ ನೀನು
ಸುಮ್ಮನೆ ಇದ್ದೇನು ಅಮ್ಮಿಯ ಬೇಡೆನು
ಮಮ್ಮು ಉಣ್ಣುತೇನೆ ಅಮ್ಮ ಅಳುವುದಿಲ್ಲ
ಹೆಣ್ಣುಗಳಿರುವಲ್ಲಿ ಪೋಗಿ ಅವರ
ಕಣ್ಣು ಮುಚ್ಚುವುದಿಲ್ಲವೆ
ಕಿಣ್ಣರ ಬಡಿಯೆನು, ಅಣ್ಣನ ಬೈಯೆನು
ಬೆಣ್ಣೆಯ ಬೇಡೆನು ಮಣ್ಣು ತಿನ್ನುವುದಿಲ್ಲ
ಗುಮ್ಮನ ಕರೆಯದಿರೆ ಅಮ್ಮ ನೀನು
ಬಾವಿಗೆ ಹೋಗೆ ಕಾಣೆ ಅಮ್ಮ ನಾನು
ಹಾವಿನೊಳಾಡೆ ಕಾಣೆ
ಆವಿನ ಮೊಲೆಯೂಡೆ ಕರುಗಳ ಬಿಡೆ ನೋಡೆ
ದೇವರಂತೆ ಒಂದು ಠಾವಿಗೆ ಕೂಡುವೆ
ಗುಮ್ಮನ ಕರೆಯದಿರೆ ಅಮ್ಮಾ
ಮಗನ ಮಾತ ಕೇಳಿ ಗೋಪಿದೇವಿ
ಮುಗುಳು ನಗುವ ನಗುತ
ಜಗದೊಡೆಯ ಶ್ರೀಪುರಂದರವಿಠಲನ
ಬಿಗಿದಪ್ಪಿಕೊಂಡಳು ಮೋಹದಿಂದಾಗ
ಗುಮ್ಮನ ಕರೆಯದಿರೆ ಅಮ್ಮಾ
ಸಾಹಿತ್ಯ: ಪುರಂದರದಾಸರು
ಚಿತ್ರ: ಅನುರಾಧಾ
ಸಂಗೀತ: ರಾಜನ್ ಮತ್ತು ನಾಗೇಂದ್ರ
ಗಾಯನ: ಪಿ. ಬಿ. ಶ್ರೀನಿವಾಸ್ ಮತ್ತು ಎಸ್. ಜಾನಕಿ
ಚಿತ್ರಗೀತೆಗೆ ಕೊಂಡಿ
ಸುಮ್ಮನೆ ಇದ್ದೇನು ಅಮ್ಮಿಯ ಬೇಡೆನು
ಮಮ್ಮು ಉಣ್ಣುತೇನೆ ಅಮ್ಮ ಅಳುವುದಿಲ್ಲ
ಹೆಣ್ಣುಗಳಿರುವಲ್ಲಿ ಪೋಗಿ ಅವರ
ಕಣ್ಣು ಮುಚ್ಚುವುದಿಲ್ಲವೆ
ಕಿಣ್ಣರ ಬಡಿಯೆನು, ಅಣ್ಣನ ಬೈಯೆನು
ಬೆಣ್ಣೆಯ ಬೇಡೆನು ಮಣ್ಣು ತಿನ್ನುವುದಿಲ್ಲ
ಗುಮ್ಮನ ಕರೆಯದಿರೆ ಅಮ್ಮ ನೀನು
ಬಾವಿಗೆ ಹೋಗೆ ಕಾಣೆ ಅಮ್ಮ ನಾನು
ಹಾವಿನೊಳಾಡೆ ಕಾಣೆ
ಆವಿನ ಮೊಲೆಯೂಡೆ ಕರುಗಳ ಬಿಡೆ ನೋಡೆ
ದೇವರಂತೆ ಒಂದು ಠಾವಿಗೆ ಕೂಡುವೆ
ಗುಮ್ಮನ ಕರೆಯದಿರೆ ಅಮ್ಮಾ
ಮಗನ ಮಾತ ಕೇಳಿ ಗೋಪಿದೇವಿ
ಮುಗುಳು ನಗುವ ನಗುತ
ಜಗದೊಡೆಯ ಶ್ರೀಪುರಂದರವಿಠಲನ
ಬಿಗಿದಪ್ಪಿಕೊಂಡಳು ಮೋಹದಿಂದಾಗ
ಗುಮ್ಮನ ಕರೆಯದಿರೆ ಅಮ್ಮಾ
ಸಾಹಿತ್ಯ: ಪುರಂದರದಾಸರು
ಚಿತ್ರ: ಅನುರಾಧಾ
ಸಂಗೀತ: ರಾಜನ್ ಮತ್ತು ನಾಗೇಂದ್ರ
ಗಾಯನ: ಪಿ. ಬಿ. ಶ್ರೀನಿವಾಸ್ ಮತ್ತು ಎಸ್. ಜಾನಕಿ
ಚಿತ್ರಗೀತೆಗೆ ಕೊಂಡಿ
ವಿದ್ಯಾಭೂಷಣರ ಗಾಯನದಲ್ಲಿ ಈ ಗೀತೆ ಇಲ್ಲಿದೆ
ಕಾಮೆಂಟ್‌ಗಳು