ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಹಣ್ಣು ಬಂದಿದೆ ಕೊಳ್ಳಿರೋ ನೀವೀಗ


ಹಣ್ಣು ಬಂದಿದೆ ಕೊಳ್ಳಿರೋ ನೀವೀಗ
ಚೆನ್ನಬಾಲಕೃಷ್ಣನೆಂಬೊ ಚೆನ್ನಾದ ಬಾಳೆಯಹಣ್ಣು 
ಹವ್ಯಕವ್ಯದ ಹಣ್ಣು ಸವಿವ ಸಕ್ಕರೆಹಣ್ಣು
ಭವರೋಗಗಳನೆಲ್ಲ ಕಳೆವ ಹಣ್ಣು,

ನವನೀತ ಚೋರನೆಂಬ ಯಮನ ಅಂಜಿಪ ಹಣ್ಣು
ಅವನಿಯೊಳ್ ಶ್ರೀರಾಮನೆಂಬೊ ಹಣ್ಣು
ಕೊಳೆತು ಹೋಗುವುದಲ್ಲ ಹುಳಿತು ಹೋಗುವುದಲ್ಲ
ಕಳೆದು ಬಿಸಾಡಿಸಿ ಕೊಳ್ಳುವುದಲ್ಲ,

ಅಳೆದು ಕೊಂಬುವುದಲ್ಲ ಗಿಳಿ ಕಚ್ಚಿ ತಿಂಬೊದಲ್ಲ
ಒಳಿತಾದ ಹರಿಯೆಂಬೊ ಮಾವಿನಹಣ್ಣು
ಕೆಟ್ಟು ನಾರುವುದಲ್ಲ ಬಿತ್ತಿ ಬೆಳೆಯೋದಲ್ಲ
ಕಷ್ಟದಿ ಹಣಕೊಟ್ಟು ಕೊಂಬುವುದಲ್ಲ,
ಸೃಷ್ಟಿಯೊಳಗೆ ನಮ್ಮ ಪುರಂದರವಿಠ್ಠಲ
ಕೃಷ್ಣರಾಯನೆಂಬೊ ಶ್ರೇಷ್ಠವಾದ ಹಣ್ಣು

ಸಾಹಿತ್ಯ: ಪುರಂದರದಾಸರು

Tag: Hannu bandide kolliro 


ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ