ವನಸುಮ
ವನಸುಮ
ವನಸುಮದೊಲೆನ್ನ ಜೀ
ವನವು ವಿಕಸಿಸುವಂತೆ
ಮನವನನುಗೊಳಿಸು ಗುರುವೇ – ಹೇ
ದೇವ
ಜನಕೆ ಸಂತಸವೀವ
ಘನನು ನಾನೆಂದೆಂಬ
ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ
ಕಾನನದಿ ಮಲ್ಲಿಗೆಯು
ಮೌನದಿಂ ಬಿರಿದು ನಿಜ
ಸೌರಭವ ಸೂಸಿ ನಲವಿಂ
ತಾನೆಲೆಯ ಪಿಂತಿರ್ದು
ದೀನತೆಯ ತೋರಿ ಅಭಿ
ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ
ಉಪಕಾರಿ ನಾನು ಎ
ನ್ನುಪಕೃತಿಯು ಜಗಕೆಂಬ
ವಿಪರೀತ ಮತಿಯನಳಿದು
ವಿಪುಲಾಶ್ರಯವನೀವ
ಸುಫಲಸುಮಭರಿತ ಪಾ
ದಪದಂತೆ ನೈಜಮಾದೊಳ್ಪಿಂ ಬಾಳ್ವವೊಲು
ಸಾಹಿತ್ಯ: ಡಿ. ವಿ. ಗುಂಡಪ್ಪ
Tag: Vanasuma, Vanasumadolenna jeevanavu
ಕಾಮೆಂಟ್‌ಗಳು