ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ನಿಂಬೆಗಿಡ ತುಂಬಾ ಚಂದ...

ನಾ ಚಿಕ್ಕವನಾಗಿದ್ದಾಗ ಅಪ್ಪ ಹೇಳುತ್ತಿದ್ದರು
ಈ ನಿಂಬೆಯ ಗಿಡದಿಂದೊಳ್ಳೆಯ ಪಾಠವ ಕಲೀ ಮಗು
ನೀ ಪ್ರೇಮದಲ್ಲಿ ಎಂದೂ ನಂಬಿಕೆ ಇಡಬೇಡಾಮರಿ
ಅ ಪ್ರೇಮವೂ ಸಹಾ ನಿಂಬೆಯ ಗಿಡದಂತೆಬುದ ನೀ ತಿಳಿ
ನಿಂಬೆಗಿಡ ತುಂಬಾ ಚೆಂದ, ನಿಂಬೆಯ ಹೂವು ತುಂಬಾ ಸಿಹಿ
ಆದರೆ ನಿಂಬೆಯ ಹಣ್ಣು ಕಂದ, ತಿನ್ನಲು ಬಹಳ ಹುಳಿ ಕಹಿ

ಯೌವನದಲ್ಲಿ ನಾನು ಒಂದು ಹುಡುಗಿಯ ಪ್ರೇಮಿಸಿದೆ
ಆ ಹುಡುಗಿಯು ನನಗೆ ಊಡಿಸುತ್ತಿದ್ದಳು ದಿನವೂ ಪ್ರೇಮಸುಧೆ
ಸೂರ್ಯನತ್ತಲೇ ಸೂರ್ಯಕಾಂತಿ ಮೊಗವೆತ್ತಿ ತಿರುಗುವಂತೆ
ಆ ಹುಡುಗಿಯ ಮೋಹದಲ್ಲಿ ನಾ ಅಪ್ಪನ ಮಾತನಾ ಮರೆತೆ
ನಿಂಬೆಗಿಡ ತುಂಬಾ ಚೆಂದ, ನಿಂಬೆಯ ಹೂವು ತುಂಬಾ ಸಿಹಿ
ಆದರೆ ನಿಂಬೆಯ ಹಣ್ಣು ಕಂದ, ತಿನ್ನಲು ಬಹಳ ಹುಳಿ ಕಹಿ

ನಿಂಬೆಯ ಗಿಡದ ರೆಂಬೆ ರೆಂಬೆಯಲು ನೂರು ನೂರು ಮುಳ್ಳು
ಹುಡುಗಿಯ ಪ್ರೇಮದ ಮಾತುಗಳೆಲ್ಲಾ ಶುದ್ಧ ಕಪಟ ಸುಳ್ಳು
ಬೇರೊಬ್ಬನ ಕೊಬ್ಬಿಗೆ ಶಾಖವಾಗಿಹಳು ನನ್ನ ಹುಡುಗಿ ಇಂದು
ಅಪ್ಪನ ಕಿರುನಗೆ ರೇಗಿಸುತ್ತಿದೇ ಬುದ್ಧಿಬಂತೆ ಎಂದು!
ನಿಂಬೆಗಿಡ ತುಂಬಾ ಚೆಂದ, ನಿಂಬೆಯ ಹೂವು ತುಂಬಾ ಸಿಹಿ
ಆದರೆ ನಿಂಬೆಯ ಹಣ್ಣು ಕಂದ, ತಿನ್ನಲು ಬಹಳ ಹುಳಿ ಕಹಿ

ಸಾಹಿತ್ಯ: ಬಿ.ಆರ್. ಲಕ್ಷ್ಮಣರಾವ್

Tag: Nimbe gida tumba chanda, Na chikkavaniddaaga appa heluttiddaru

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ