ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ತಿಳಿಮುಗಿಲ ತೊಟ್ಟಿಲಲಿ



ತಿಳಿಮುಗಿಲ ತೊಟ್ಟಿಲಲಿ ಮಲಗಿದ್ದ ಚಂದಿರನ
ಗಾಳಿ ಜೋಗುಳ ಹಾಡಿ ತೂಗುತಿತ್ತು
ಗರಿಮುದುರಿ ಮಲಗಿದ್ದ ಹಕ್ಕಿ ಗೂಡುಗಳಲ್ಲಿ
ಇರುಳು ಹೊಂಗನಸೂಡಿ ಸಾಗುತಿತ್ತು

ಮುಗುಳಿರುವ ಹೊದರಿನಲಿ ನಸುಗಂಪಿನುದರದಲಿ
ಜೇನುಗನಸಿನಾ ಹಾಡು ಕೇಳುತಿತ್ತು
ತುಂಬು ನೀರಿನ ಹೊಳೆಯೊಳ್ ಅಂಬಿಗನ ಕಿರುದೋಣಿ
ಪ್ರಸ್ಥಾನ ಗೀತೆಯನು ಹಾಡುತಿತ್ತು 

ಬರುವ ಮುಂದಿನ ದಿನದ ನವ ನವೋದಯಕ್ಕಾಗಿ
ಪ್ರಕೃತಿ ತಪವಿರುವಂತೆ ತೋರುತಿತ್ತು
ಶಾಂತ ರೀತಿಯಲಿರುಳು ಮೆಲ್ಲ ಮೆಲ್ಲನೆ ಉರುಳಿ
ನಾಳಿನ ಶುಭೋದಯ ಸಾರುತಿತ್ತು

ಸಾಹಿತ್ಯ: ಡಾ. ಎಸ್. ವಿ. ಪರಮೇಶ್ವರ ಭಟ್ಟ


Tag: Tilimugila tottilali

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ