ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಹಾಡೊಂದ ಹಾಡುವೇ.....


ಹಾಡೊಂದ ಹಾಡುವೆ ನೀ ಕೇಳು ಮಗುವೆ
ಬರಿದಾದ ಮನೆ ಬೆಳಗೆ ನೀನೆಂದು ಬರುವೇ
ಹಾಡೊಂದ ಹಾಡುವೆ ನೀ ಕೇಳು ಮಗುವೇ

ಸೀಮಂತದಾನಂದ ನಾ ನೀಡಲಿಲ್ಲ
ನಿನಗಾಗಿ ಮಹಿಳೆಯರು ತಾ ಹಾಡಲಿಲ್ಲ
ಸೀಮಂತದಾನಂದ ನಾ ನೀಡಲಿಲ್ಲ
ನಿನಗಾಗಿ ಮಹಿಳೆಯರು ತಾ ಹಾಡಲಿಲ್ಲ
ಸಿರಿವಂತರಾ ಭೊಗ ನಿನಗಿಲ್ಲಿ ಇಲ್ಲ
ಸಿರಿಯಾಗಿ ನಿಧಿಯಾಗಿ ನೀ ಬರುವೆಯಲ್ಲ
ಹಾಡೊಂದ ಹಾಡುವೆ ನೀ ಕೇಳು ಮಗುವೆ

ನಿನ್ನೊಂದು ನುಡಿ ಮುತ್ತು ಸವಿ ಜೇನಿನಂತೆ
ಆ ಸುಖದೆ ನಾ ಮರೆವೆ ಈ ಬಾಳ ಚಿಂತೆ
ಅದ ಕೇಳೊ ಸೌಭಾಗ್ಯ ಈ ತಾಯಿಗಿಲ್ಲ
ಇವಳಾಸೆ ಆಕಾಂಕ್ಷೆ ನೀನಾದೆ ಎಲ್ಲ
ಹಾಡೊಂದ ಹಾಡುವೆ ನೀ ಕೇಳು ಮಗುವೆ
ಬರಿದಾದ ಮನೆ ಬೆಳಗೆ ನೀನೆಂದು ಬರುವೇ
ಹಾಡೊಂದ ಹಾಡುವೇ
ನೀ ಕೇಳು ಮಗುವೆ

ಚಿತ್ರ: ನಾಂದಿ
ರಚನೆ: ಆರ್ ಎನ್ ಜಯಗೋಪಾಲ್
ಗಾಯನ: ಪಿ ಬಿ ಶ್ರೀನಿವಾಸ್
ಸಂಗೀತ: ವಿಜಯಭಾಸ್ಕರ್


Tag: Handonda haduve, haadonda haaduve, nandhi

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ