ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಬಾ ಸವಿತಾ


ಬಾ ಸವಿತಾ ಬಾ ಸವಿತಾ ಬಾ ಸವಿತಾ

ಒಳಗಿನ ಕಣ್ಣನು ಮುಚ್ಚಿಸಿ ಒಮ್ಮೆ
ತಿಳಿವಿಗೆ ಬಣ್ಣವ ಹಚ್ಚಿಸಿ ಒಮ್ಮೆ
ಒಳಿತಲ್ಲದುದೆ ಒಳಿತೆಂಬುದರ
ಚಳಕವೆಲ್ಲಕೆ ವಿನಾಶವ ತಾ

ಬಾ ಸವಿತಾ ಬಾ ಸವಿತಾ ಬಾ ಸವಿತಾ

ನೆಲೆಯಿಂದ ಹೊರಟು ಅಲೆ ಅಲೆ ಅಲೆ ಅಲೆ
ಛಲ ತೊಟ್ಟ ಮಲ್ಲ ವಾಹಿನಿ ಬಾ
ನಿಲವಿಲ್ಲಾ ಜಗದಿ ಕತ್ತಲೆಗೆಂದು
ಗೆಲವನು ಸಾರುವ ಭಾಸವ ತಾ

ಬಾ ಸವಿತಾ ಬಾ ಸವಿತಾ ಬಾ ಸವಿತಾ

ಓಂ ತತ್ ಸವಿತುರ್ವರೇಣ್ಯವೆಂದೆವು
ಅಂತಲ್ಲದೆ ಬೇರೇನನು ನಂಬೆವು
ಪಂಥವ ಬೆಳಗಿಸಿ ನಿರೂಪಿಸಿ ಕಾಂಬೆವು
ಶಾಂತ ಸುಂದರ ಶಿವದಾ ಸವಿತಾ

ಬಾ ಸವಿತಾ ಬಾ ಸವಿತಾ ಬಾ ಸವಿತಾ ಬಾ ಸವಿತಾ

ಸಾಹಿತ್ಯ: ಮಾಸ್ತಿ ವೆಂಕಟೇಶ ಅಯ್ಯಂಗಾರ್

ಚಿತ್ರ: ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ದಿನಾಂಕ 19.07.2013ರಂದು

Tag: Ba Savita

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ