ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ತಾಯಿ ಶಾರದೆ ಲೋಕ ಪೂಜಿತೆ ಜ್ಞಾನದಾತೆ ನಮೋಸ್ತುತೆ

ತಾಯಿ ಶಾರದೆ ಲೋಕ ಪೂಜಿತೆ ಜ್ಞಾನದಾತೆ ನಮೋಸ್ತುತೆ
ಪ್ರೇಮದಿಂದಲಿ ಸಲಹು ಮಾತೆ ನೀಡು ಸನ್ಮತಿ ಸೌಖ್ಯದಾತೆ

ಅಂಧಕಾರವ ಓಡಿಸು ಜ್ಞಾನ ಜ್ಯೋತಿಯ ಬೆಳಗಿಸು
ಹೃದಯ ಮಂದಿರದಲ್ಲಿ ನೆಲೆಸು ಚಿಂತೆಯಾ ಅಳಿಸು
ಶಾಂತಿಯಾ ಉಳಿಸು

ನಿನ್ನ ಮಡಿಲಿನ ಮಕ್ಕಳಮ್ಮ ನಿನ್ನ ನಂಬಿದ ಕಂದರಮ್ಮ
ನಿನ್ನ ಕರುಣೆಯ ಬೆಳಕಲೆಮ್ಮ ಬಾಳನೂ ಬೆಳಗಮ್ಮ
ನಮ್ಮ ಕೋರಿಕೆ ಆಲಿಸಮ್ಮ

ಒಳ್ಳೆ ಮಾತುಗಳಾಡಿಸು ಒಳ್ಳೆ ಕೆಲಸವ ಮಾಡಿಸು
ಒಳ್ಳೆ ದಾರಿಯಲೆಮ್ಮ ನಡೆಸು ವಿದ್ಯೆಯಾ ಕಲಿಸು
ಆಸೆ ಪೂರೈಸೂ

ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್ ಮತ್ತು ನಾಗೇಂದ್ರ
ಗಾಯನ: ಪಿ. ಬಿ. ಶ್ರೀನಿವಾಸ್
ಅಭಿನಯ: ಪ್ರಸಿದ್ಧ ನಿರ್ದೇಶಕ: ಎನ್ ಲಕ್ಷ್ಮೀನಾರಾಯಣ್ ಮತ್ತು ಬಾಲನಟನಾಗಿದ್ದ ಪುನೀತ್ ರಾಜ್ ಕುಮಾರ್ ಮತ್ತು ಇತರ  ಮಕ್ಕಳು.


Tag: Tayi sharade loka pujite, taayi sharade loka poojite, thayi sharade loka pujite

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ