ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಯಾವ ಜನ್ಮದ ಮೈತ್ರಿ ಈ ಜನ್ಮದಲಿ ಬಂದು


ಯಾವ ಜನ್ಮದ ಮೈತ್ರಿ ಈ ಜನ್ಮದಲಿ ಬಂದು
ನಮ್ಮಿಬ್ಬರನು ಮತ್ತೆ ಬಂಧಿಸಿಹುದೋ ಕಾಣೆ
ಎಲ್ಲಿದ್ದರೇನಂತೆ ನಿನ್ನನೊಲಿಯದೆ ಮಾಣೆ
ಗುರುದೇವನಾಣೆ, ಓ ನನ್ನ ನೆಚ್ಚಿನ ಬಂಧು

ವಿಶ್ವಜೀವನವೊಂದು ಪಾರವಿಲ್ಲದ ಸಿಂಧು
ಮೇಲೆತೆರೆನೊರೆ ಎದ್ದು ಭೋರ್ಗರೆಯುತಿರೆ ರೇಗಿ
ಅದರಂತರಾಳದಲಿ ಗುಪ್ತಗಾಮಿನಿಯಾಗಿ
ಹೃದಯಗಳು ನಲಿಯುತಿರೆ ಪ್ರೇಮತೀರ್ಥದಿ ಮಿಂದು

ಅದರರ್ಥಗಿರ್ಥಗಳು ಸೃಷ್ಠಿಕರ್ತನಿಗಿರಲಿ
ವ್ಯರ್ಥ ಜಿಜ್ಞಾಸೆಸೆಯಲಿ ಕಾಲಹರಣವದೇಕೆ
ಬಾರಯ್ಯ ಮಮ ಬಂಧು ಜೀವನ ಪಥದೊಳು
ಒಂದಾಗಿ ಮುಂದುವರೆಯುವಾ

ರಚನೆ: ಕುವೆಂಪು.

Tag: Yava janmada maithri, yava janmada mythri

ಕಾಮೆಂಟ್‌ಗಳು

  1. ನಮ್ಮ ಕುವೆಂಪು ಸಾಹಿತ್ಯದಲ್ಲಿ ತುಂಬಾ ಆಳವಾಗಿ ಹುಡುಕಿ ಹೆಕ್ಕಿ ತೆಗೆಯುವ ಮೂಲಕ ಕನ್ನಡ ದಲ್ಲಿಶಾಶ್ವ್ತತವಾಗಿ ಉಳಿದಿದ್ದಾರೆ.

    ಪ್ರತ್ಯುತ್ತರಅಳಿಸಿ
ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ