ಕಂಡು ಕಂಡು ನೀ ಎನ್ನ ಕೈ ಬಿಡುವರೇ ಕೃಷ್ಣ
ಕಂಡು ಕಂಡು ನೀ ಎನ್ನ ಕೈ ಬಿಡುವರೇ ಕೃಷ್ಣ
ಪುಂಡರೀಕಾಕ್ಷ ಶ್ರೀ ಪುರುಷೋತ್ತಮ ದೇವ
ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ
ನಿಂದೆಯಲಿ ನೊಂದೆನೈ ನೀರಜಾಕ್ಷ
ತಂದೆತಾಯಿಯು ನೀನೆ ಬಂಧುಬಳಗವು ನೀನೆ
ಎಂದೆಂದಿಗೂ ನಿನ್ನ ನಂಬಿದೆನೋ ಶ್ರೀಕೃಷ್ಣಾ
ಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ
ಎಣಿಸಲಾರದ ಭವದಿ ನೊಂದೆ ನಾನು
ಸನಕಾದಿಮುನಿವಂದ್ಯ ವನಜಸಂಭವ ಜನಕ
ಫಣಿಶಾಯಿ ಪ್ರಹ್ಲಾದಗೊಲಿದ ಶ್ರೀಕೃಷ್ಣಾ
ಭಕ್ತವತ್ಸಲನೆಂಬೊ ಬಿರುದು ಪೊತ್ತಾ ಮೇಲೆ
ಭಕ್ತರಾಧೀನನಾಗಿರಬೇಡವೆ
ಮುಕ್ತಿದಾಯಕ ನೀನು ಹೊನ್ನೂರುಪುರವಾಸ
ಶಕ್ತಗುರು ಪುರಂದರವಿಠಲ ಶ್ರೀಕೃಷ್ಣ
ಸಾಹಿತ್ಯ: ಪುರಂದರದಾಸರು
ಪುಂಡರೀಕಾಕ್ಷ ಶ್ರೀ ಪುರುಷೋತ್ತಮ ದೇವ
ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ
ನಿಂದೆಯಲಿ ನೊಂದೆನೈ ನೀರಜಾಕ್ಷ
ತಂದೆತಾಯಿಯು ನೀನೆ ಬಂಧುಬಳಗವು ನೀನೆ
ಎಂದೆಂದಿಗೂ ನಿನ್ನ ನಂಬಿದೆನೋ ಶ್ರೀಕೃಷ್ಣಾ
ಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ
ಎಣಿಸಲಾರದ ಭವದಿ ನೊಂದೆ ನಾನು
ಸನಕಾದಿಮುನಿವಂದ್ಯ ವನಜಸಂಭವ ಜನಕ
ಫಣಿಶಾಯಿ ಪ್ರಹ್ಲಾದಗೊಲಿದ ಶ್ರೀಕೃಷ್ಣಾ
ಭಕ್ತವತ್ಸಲನೆಂಬೊ ಬಿರುದು ಪೊತ್ತಾ ಮೇಲೆ
ಭಕ್ತರಾಧೀನನಾಗಿರಬೇಡವೆ
ಮುಕ್ತಿದಾಯಕ ನೀನು ಹೊನ್ನೂರುಪುರವಾಸ
ಶಕ್ತಗುರು ಪುರಂದರವಿಠಲ ಶ್ರೀಕೃಷ್ಣ
ಸಾಹಿತ್ಯ: ಪುರಂದರದಾಸರು
ಚಿತ್ರ: ಭಲೇ ಅದೃಷ್ಟವೋ ಅದೃಷ್ಟ
ಗಾಯನ: ಎಸ್. ಜಾನಕಿ
ಗಾಯನ: ಎಸ್. ಜಾನಕಿ
Tag: Kandu kandu nee enna, kandu kandu neenenna
ಕಾಮೆಂಟ್‌ಗಳು