ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು


ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು
ಚಿಕ್ಕವ್ವ..ಚಿಕ್ಕವ್ವ..ಎನ್ನುತ ತನ್ನಯ ಗೆಳೆಯರ ಕರೆದಿತ್ತು
ಅದ ಕೇಳಿ ನಾ ಮೈ ಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ದೂರದ ಗುಡಿಯಲಿ ಪೂಜೆಯ ವೇಳೆಗೆ ಘಂಟೆಯು ಮೊಳಗಿತ್ತು
ಟಣ್ ಡಣ್ ಟಣ್ ಡಣ್..ಎನ್ನುತ ಸೇವೆಗೆ ಎಲ್ಲರ ಕರೆದಿತ್ತು
ಅದ ಕೇಳಿ ನಾ ಮೈಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ಹರಿಯುವ ನದಿಯ ನೋಡುತ ನಿಂತೆ ಅಲೆಗಳು ಕುಣಿದಿತ್ತು
ಕಲ ಕಲ ಕಲ ಕಲ.....  ಮಂಜುಳ ನಾದವು ಕಿವಿಗಳ ತುಂಬಿತ್ತು
ಅದ ಕೇಳಿ ನಾ ಮೈ ಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ಚಿತ್ರ: ಉಪಾಸನೆ
ರಚನೆ:  ಆರ್. ಎನ್. ಜಯಗೋಪಾಲ್
ಸಂಗೀತ: ವಿಜಯಭಾಸ್ಕರ್
ಗಾಯನ: ಬಿ. ಕೆ. ಸುಮಿತ್ರ


Tag: Sampige marada hasirele naduve kogile hadittu, sampige marada hasurele naduve kogile haadittu

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ