ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ನೀನು ನೀನೆ ಇಲ್ಲಿ ನಾನು ನಾನೆ

ನೀನು ನೀನೆ ಇಲ್ಲಿ ನಾನು ನಾನೆ
ನೀನು ಎಂಬುವನಿಲ್ಲಿ ನಾದವಾಗಿರುವಾಗ
ನಾನೇನು ಹಾಡಲಯ್ಯ ದಾಸಾನುದಾಸ

ನಾದದ ಶೃತಿ ನೀಡಿ ತುಂಬುರ ಸ್ಮೃತಿ ಹಾಡಿ
ಕೈಲಾಸವೆಲ್ಲ ನಾದೋಪಾಸನೆಯಾಗಿ
ಶಣ್ಮುಖಪ್ರಿಯ ರಾಗ ಮಾರ್ಗ ಹಿಂದೋಳವಾಗಿ
ನಡೆಸಿದೆ ದರಬಾರು ನೋಡು
ಹಾಡುವೆಯ ಪಲ್ಲವಿಯ
ಕೇಳುವೆಯ, ಮೇಲೆ ಏಳುವೆಯ

ನೀನು ಎಂಬುವನಿಲ್ಲಿ ನಾದವಾಗಿರುವಾಗ
ನಾನೇನು ಹಾಡಲಯ್ಯ ದಾಸಾನುದಾಸ
ನೀನು ನೀನೆ ಇಲ್ಲಿ ನಾನು ನಾನೆ

ಈ ಸ್ವರವೆ ವಾದ
ಈಶ್ವರನೆ ನಾದ
ಗತಿಗತಿಯ ಕಾಗುಣಿತ ವೇದ
ಶಿವಸ್ಮರಣೆ ಸಂಗೀತ ಸ್ವಾದ
ಗಮಕಗಳ ಪಾಂಡಿತ್ಯ ಶೋಧ
ಸುಮತಿಗಳ ಸುಜ್ಞಾನ ಬೋಧ
ಬದುಕುಗಳ ವಿಚಾರಣೆ ಕ್ಷಮಾಪಣೆ ವಿಮೋಚನೆ
ಗೆಲುವುಗಳ ಆಲೋಚನೆ ಸರಸ್ವತಿ ಸಮರ್ಪಣೆ
ನವರಸ ಅರಗಿಸಿ ಪರವಷ ಪಳಗಿಸಿ
ಅಪಜಯ ಅಡಗಿಸಿ ಜಯಿಸಲು ಇದು
ಶಕುತಿಯ ಯುಕುತಿಯ ವಿಷಯಾರ್ಥ
ಗಣಗಣ ಶಿವಗಣ ನಿಜಗುಣ ಶಿವಮನ
ನಲಿದರೆ ಒಲಿದರೆ ಕುಣಿದರೆ ಅದೆ
ಭಕುತಿಯ ಮುಕುತಿಯ ಪರಮಾರ್ಥ

ಚಿತ್ರ: ಗಡಿಬಿಡಿ ಗಂಡ
ಸಾಹಿತ್ಯ ಮತ್ತು ಸಂಗೀತ: ಹಂಸಲೇಖ
ಗಾಯನ: ಎಸ್. ಪಿ. ಬಾಲಸುಬ್ರಮಣ್ಯಮ್


Tag: Neenu neene illi naanu naane


ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ