ವಸಂತ
ವಸಂತ
ವಸಂತ ಬಂದ, ಋತುಗಳ ರಾಜ ತಾ ಬಂದ,
ಚಿಗುರನು ತಂದ, ಹೆಣ್ಗಳ ಕುಣಿಸುತ ನಿಂದ,
ಚಳಿಯನು ಕೊಂದ, ಹಕ್ಕಿಗಳುಲಿಗಳ ಚೆಂದ,
ಕೂವು, ಜಗ್ ಜಗ್, ಪುವ್ವೀ, ಟೂವಿಟ್ಟವೂ!
ಕುರಿ ನೆಗೆದಾಟ, ಕುರುಬರ ಕೊಳಲಿನೂದಾಟ,
ಇನಿಯರ ಬೇಟ; ಬನದಲಿ ಬೆಳದಿಂಗಳೂಟ,
ಹೊಸ ಹೊಸ ನೋಟ, ಹಕ್ಕಿಗೆ ನಲಿವಿನ ಪಾಠ,
ಕೂವೂ, ಜಗ್ ಜಗ್, ಪುವ್ವೀ,ಟೂವಿಟ್ಟವೂ!
ಮಾವಿನ ಸೊಂಪು, ಮಲ್ಲಿಗೆ ಬಯಲೆಲ್ಲ ಕಂಪು,
ಗಾಳಿಯ ತಂಪು, ಜನಗಳ ಜಾತ್ರೆಯ ಗುಂಪು,
ಕಿವಿಗಳಿಗಿಂಪು ಹಕ್ಕಿಗಳುಲುಹಿನ ಪೆಂಪು
ಕೂವೂ, ಜಗ್ ಜಗ್, ಪುವ್ವೀ, ಟೂವಿಟ್ಟವೂ!
ಬಂದ ವಸಂತ - ನಮ್ಮಾ
ರಾಜ ವಸಂತ!
ಸಾಹಿತ್ಯ: ಬಿ.ಎಂ. ಶ್ರೀ
NASH (1565-1601): Spring
Tag: Vasanta Banda, Vasantha Bandha
Tag: Vasanta Banda, Vasantha Bandha
ಕಾಮೆಂಟ್‌ಗಳು