ನಿನ್ನ ಪ್ರೇಮದ ಪರಿಯ
ನಾನರಿಯೆ ಕನಕಾಂಗಿ
ನಿನ್ನೊಳಿದೆ ನನ್ನ ಮನಸ್ಸು
ಹುಣ್ಣಿಮೆಯ ರಾತ್ರಿಯಲಿ
ಉಕ್ಕುವುದು ಕಡಲಾಗಿ
ನಿನ್ನೊಲುಮೆ ನನ್ನ ಕಂಡು
ನಿನ್ನೊಳಿದೆ ನನ್ನ ಮನಸ್ಸು
ಸಾಗರನ ಹೃದಯದಲಿ
ರತ್ನಪರ್ವತ ಮಾಲೆ
ಮಿಂಚಿನಲಿ ಮೀವುದಂತೆ
ತೀರದಲಿ ಬಳುಕುವಲೆ
ಕಣ್ಣಚುಂಬಿಸಿ ಮತ್ತೆ
ಸಾಗುವುದು ಕನಸಿನಂತೆ
ನಿನ್ನೊಳಿದೆ ನನ್ನ ಮನಸ್ಸು
ಅಲೆಬಂದು ಕರೆಯುವುದು
ನಿನ್ನೊಲುಮೆ ಅರಮನೆಗೆ
ಒಳಗಡಲ ರತ್ನಪುರಿಗೆ
ಅಲೆಯಿಡುವ ಮುತ್ತಿನಲೆ
ಕಾಣುವುದು ನಿನ್ನೊಲುಮೆ
ಒಳಗುಡಿಯ ಮೂರ್ತಿಮಹಿಮೆ
ನಿನ್ನೊಳಿದೆ ನನ್ನ ಮನಸ್ಸು
ಸಾಹಿತ್ಯ:
ಕೆ ಎಸ್ ನರಸಿಂಹ ಸ್ವಾಮಿ
ಸಂಗೀತ:
ಸಿ ಅಶ್ವಥ್
ಗಾಯನ: ಎಸ್ ಪಿ ಬಾಲಸುಬ್ರಮಣ್ಯಂ
ಗಾಯನ: ಎಸ್ ಪಿ ಬಾಲಸುಬ್ರಮಣ್ಯಂ
Tag: Ninna premada pariya naanariye kanakaangi
ಕಾಮೆಂಟ್‌ಗಳು