ಇವಳು ಯಾರು ಬಲ್ಲೆಯೇನು
ಇವಳು ಯಾರು ಬಲ್ಲೆಯೇನು
ಇವಳ ಹೆಸರು ಹೇಳಲೇನು
ಇವಳ ದನಿಗೆ ತಿರುಗಲೇನು
ಇವಳು ಏತಕೋ ಬಂದು ನನ್ನ ಸೆಳೆದಳು
ಅಡಿಯ ಮುಟ್ಟ ನೀಳ ಜಡೆ
ಮುಡಿಯ ತುoಬ ಹೂವು ಹೆಡೆ
ಇವಳು ಅಡಿಯನಿಟ್ಟ ಕಡೆ
ಹೆಜ್ಜೆ ಹಜ್ಜೆಗೆ
ಒಂದು ದೊಡ್ಡ ಮಲ್ಲಿಗೆ
ಅoಗಾಲಿನ ಸಂಜೆಗೆಂಪು
ಕಾಲಂದುಗೆ ಗೆಜ್ಜೆ ಇಂಪು
ಮೋಹದ ಮಲ್ಲಿಗೆಯ ಕಂಪು
ಕರೆದುವೆನ್ನನು
ನಾನು ಹಿಡಿಯ ಹೋದೆನು
ಬಂಗಾರದ ಬೆಳಕಿನೊಳಗೆ
ಮುಂಗಾರಿನ ಮಿoಚು ಬೆಳಗೆ
ಇಳೆಗಿಳಿದಿಹ ಮೋಡದೊಳಗೆ
ಮೆರೆಯಿತಿದ್ದಳು ನನ್ನ ಕರೆಯುತಿದ್ದಳು
ಸಾಹಿತ್ಯ: ಕೆ. ಎಸ್. ನರಸಿಂಹಸ್ವಾಮಿ
ಚಿತ್ರ: ಗೌರಿ
ಸಂಗೀತ: ಜಿ. ಕೆ. ವೆಂಕಟೇಶ್
ಗಾಯನ: ಪಿ. ಬಿ. ಶ್ರೀನಿವಾಸ್ ಮತ್ತು ಎಸ್. ಜಾನಕಿ
Tag: Ivalu yaru balleyenu, Ivalu Yaaru balleyenu
ಕಾಮೆಂಟ್‌ಗಳು