ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ತನು ಕರಗದವರಲ್ಲಿ



ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು
ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯಾ ನೀನು

ಹದುಳಿಗಳಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು
ಜ್ಞಾನಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯಾ ನೀನು

ಅರಿವು ಕಣ್ದೆರೆಯದವರಲ್ಲಿ ಆರತಿಯನೊಲ್ಲೆಯಯ್ಯಾ ನೀನು
ತ್ರಿಕರಣ ಶುದ್ಧವಿಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯಾ ನೀನು

ಪರಿಣಾಮಿಗಳಲ್ಲದವರಲ್ಲಿ ಇರಲೊಲ್ಲೆಯಯ್ಯಾ ನೀನು
ಹೃದಯ ಕಮಲ ಶುದ್ಧವಿಲ್ಲದವರಲ್ಲಿ ಇರಲೊಲ್ಲೆಯಯ್ಯಾ ನೀನು
ಎನ್ನಲ್ಲಿ ಏನುಂಟೆಂದು ಎನ್ನ ಕರಸ್ಥಲವನಿಂಬುಗೊಂಡೆ
ಹೇಳಾ ಚೆನ್ನಮಲ್ಲಿಕಾರ್ಜುನಾ

ಸಾಹಿತ್ಯ: ಅಕ್ಕಮಹಾದೇವಿ

ಚಿತ್ರ: ಕಿತ್ತೂರು ಚೆನ್ನಮ್ಮ
ಸಂಗೀತ: ಟಿ. ಜಿ. ಲಿಂಗಪ್ಪ
ಗಾಯನ:ಪಿ. ಸುಶೀಲ



ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ