ಶಾಕುಂತಲ ಸಂಧ್ಯೆ
ಶಾಕುಂತಲ ಸಂಧ್ಯೆ
ಸಂಜೆ ಬಾನಿನಂಚಿನಲ್ಲಿ
ಬಿದ್ದ ಬಿದಿಗೆ ಚಂದಿರ
ಶಚೀ ತೀರ್ಥದಾಳದಲ್ಲಿ
ಶಕುಂತಲೆಯ ಉಂಗುರ
ದುರ್ವಾಸರ ಶಾಪವಿಗೋ
ಕವಿಯುತಿಹುದು ಸುತ್ತಲೂ
ಕಂಡುದೆಲ್ಲ ಜಾರುತಿಹುದು
ಮೆಲ್ಲನಿರುಳ ತಮದೊಳು
ಅಸಹಾಯಕ ತಾರೆಬಳಗ
ಹನಿಗಣ್ಣೊಳು ನೀರವ
ಸುಯ್ಯಗಾಳಿ ತಡೆಯುತಿಹುದು
ಉಕ್ಕಿ ಬರುವ ದುಃಖವ
ಸಾಹಿತ್ಯ: ಜಿ. ಎಸ್. ಶಿವರುದ್ರಪ್ಪ
Tag: Shakuntala Sandhye, Shaakuntala Sandhye
ಕಾಮೆಂಟ್‌ಗಳು