ನೀನೆ ಪರಮ ಪಾವನಿ ನಿರಂಜನಿ
ನೀನೆ ಪರಮ ಪಾವನಿ ನಿರಂಜನಿ
ಆದಿ ನಾರಾಯಣಿ ಸಾಧು ಜನ ವಂದಿನಿ
ಸದಾನಂದ ರೂಪಿಣಿ ಸದ್ಗತಿ ಸುಖ ದಾಯಿನಿ
ಲಕ್ಷುಮಿ ರೂಪಿಣಿ ಸಾಕ್ಷಾತ್ಕರಿಣಿ
ರಕ್ಷ ರಕ್ಷಾತ್ಮಿಣಿ ಅಕ್ಷಯ ಪದದಾಯಿನಿ
ಅನಾಥ ರಕ್ಷಿಣಿ ದೀನೋದ್ಧಾರಿಣಿ
ಅನಂತಾನಂತ ಗುಣಿ ಮುನಿಜನ ಭೂಷಣಿ
ದಾರಿದ್ರ ಭಂಜನಿ ದುರಿತ ವಿಧ್ವಂಸಿನಿ
ಪರಮ ಸಂಜೀವಿನಿ ಸುರ ಮುನಿ ರಂಜನಿ
ಸ್ವಾಮಿ ಶ್ರೀ ಗುರುವಿನಿ ಬ್ರಹ್ಮಾನಂದ ರೂಪಿಣಿ
ಮಹಿಪತಿ ಕುಲ ಸ್ವಾಮಿನಿ ಪರಮ ಪಾವನಿ
ಸಾಹಿತ್ಯ: ಮಹೀಪತಿದಾಸರು
Tag: Neene parama pavani niranjani
Tag: Neene parama pavani niranjani
ಕಾಮೆಂಟ್‌ಗಳು