ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಏಳು ನಾರಾಯಣ


ಏಳು ನಾರಾಯಣ ಏಳು ಲಕ್ಷ್ಮೀರಮಣ
ಏಳು ಶ್ರೀಗಿರಿ ಒಡೆಯ ಶ್ರೀವೆಂಕಟೇಶ
ಏಳಯ್ಯ ಬೆಳಗಾಯಿತು 

ಕಾಸಿದ್ದ ಹಾಲನ್ನು ಕಾವಡಿಯೊಳು ಹೆಪ್ಪಿಟ್ಟು
ಲೇಸಾಗಿ ಕಡೆದು ಹೊಸಬೆಣ್ಣೆ ಕೊಡುವೆ
ಶೇಷಶಯನನೆ ಏಳು ಸಮುದ್ರ ಮಥನವ ಮಾಡು
ದೇಶ ಕೆಂಪಾಯಿತು ಏಳಯ್ಯ ಹರಿಯೇ 

ಅರಳು ಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳ
ಸುರರು ತಂದಿದ್ದಾರೆ ಬಲು ಭಕುತಿಯಿಂದ
ಅರವಿಂದನಾಭ ಸಿರಿ ವಿಧಿಭವಾದಿಗಳೊಡೆಯ
ಹಿರಿದಾಗಿ ಕೋಳಿ ಕೂಗಿತೇಳಯ್ಯ ಹರಿಯೇ 

ದಾಸರೆಲ್ಲರು ಬಂದು ಧೂಳಿ ದರ್ಶನ ಗೊಂಡು
ಲೇಸಾಗಿ ತಾಳ ದಂಡಿಗೆಯ ಪಿಡಿದು
ಶ್ರೀಶನೆಲೆಯಾದಿ ಕೇಶವ ನಿಮ್ಮ ಪಾದವನು
ಲೇಸಾಗಿ ಸ್ಮರಿಸಿ ಪೊಗಳುವರು ಹರಿಯೇ 

ಸಾಹಿತ್ಯ: ಕನಕದಾಸರು


Tag: Elu Narayana

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ