ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ

ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ
ನಿನ್ನ ಮುಗಿಲ ಸಾಲೇ, ಧರೆಯ ಕೊರಳ ಪ್ರೇಮದ ಮಾಲೆ
ಸುರಿವ ಒಲುಮೆಯಾ ಜಡಿಮಳೆಗೆ, ಪ್ರೀತಿ ಮೂಡಿದೆ
ಯಾವ ಚಿಪ್ಪಿನಲ್ಲಿ ಯಾವ ಹನಿಯು ಮುತ್ತಾಗುವುದೋ
ಒಲವು ಎಲ್ಲಿ ಕುಡಿಯೊಡೆಯುವುದೋ, ತಿಳಿಯದಾಗಿದೆ
ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ

ಭುವೀ ಕೆನ್ನೆ ತುಂಬಾ, ಮುಗಿಲು ಸುರಿದ ಮುತ್ತಿನ ಗುರುತು
ನನ್ನ ಎದೆಯ ತುಂಬಾ, ಅವಳು ಬಂದ ಹೆಜ್ಜೆಯ ಗುರುತು
ಹೆಜ್ಜೆ ಗೆಜ್ಜೆಯಾ ಸವಿ ಸದ್ದು, ಪ್ರೇಮ ನಾದವೋ
ಎದೇ ಮುಗಿಲಿನಲ್ಲಿ, ರಂಗು ಚೆಲ್ಲಿ ನಿಂತಳು ಅವಳು
ಬರೆದು ಹೆಸರ ಕಾಮನಬಿಲ್ಲು, ಏನೋ ಮೋಡಿಯೋ
ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ

ಯಾವ ಹನಿಗಳಿಂದ, ಯಾವ ನೆಲವು ಹಸಿರಾಗುವುದೋ
ಯಾರ ಸ್ಪರ್ಷದಿಂದ, ಯಾರ ಮನವು ಹಸಿಯಾಗುವುದೋ
ಯಾರ ಉಸಿರಲ್ಯಾರ ಹೆಸರೋ, ಯಾರು ಬರೆದರೋ
ಯಾವ ಪ್ರೀತಿ ಹೂವು, ಯಾರ ಹೃದಯದಲ್ಲರಳುವುದೋ
ಯಾರ ಪ್ರೇಮ ಪೂಜೆಗೆ ಮುಡಿಪೋ, ಯಾರು ಬಲ್ಲರೋ
ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ

ಒಲವ ಚಂದಮಾಮ, ನಗುತ ಬಂದ ಮನದಂಗಳಕೆ
ಪ್ರೀತಿ ಬೆಳಕಿನಲ್ಲಿ, ಹೃದಯ ಹೊರಟಿದೇ ಮೆರವಣಿಗೆ
ಅವಳ ಪ್ರೇಮದೂರಿನ ಕಡೆಗೆ, ಪ್ರೀತಿ ಪಯಣವೋ
ಪ್ರಣಯದೂರಿನಲ್ಲಿ, ಕಳೆದು ಹೊಗೋ ಸುಖವಾ ಇಂದು
ಧನ್ಯನಾದೆ ಪಡೆದೂಕೊಂಡು, ಹೊಸ ಜನ್ಮವೋ
ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ

ಸಾಹಿತ್ಯ : ಯೋಗರಾಜ್‌ ಭಟ್‌
ಸಂಗೀತ: ಮನೋ ಮೂರ್ತಿ
ಗಾಯಕ : ಸೋನು ನಿಗಮ್‌

ಇಲ್ಲಿ ಕೇಳಿ

https://www.youtube.com/watch?feature=player_embedded&v=tW9l3YkkMEA
Tag: Mungaru maleye enu ninna hanigala leele

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ