ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ

ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ
ಬ್ರಹ್ಮಶಂಕರಾದಿ ವಂದ್ಯ ಎನಗೆ ಮುಕ್ತಿ ತೋರಿಸೊ

ನಷ್ಟ ಮೊದಲಾದಂಥ ಕಷ್ಟ ಬಿಡಿಸೊ
ನಿನ್ನ ಪಟ್ಟದ ರಾಣಿಗೆ ಹೇಳಿ ಪದವಿ ಕೊಡಿಸೊ
ಇಷ್ಟ ಭಕ್ತಜನರೊಳು ಎನ್ನ ಸೇರಿಸೊ
ಈ ಸೃಷ್ಟಿಯೊಳು ನಿನ್ನ ದಾಸಾನು ದಾಸನೆನಿಸೊ 

ಉಟ್ಟು ಉಂಡು ಮಿಕ್ಕಿದ್ದೆಲ್ಲ ಎನಗೆ ಹಾಕಿಸೊ
ಪೊಂಬಟ್ಟಲೊಳಗಿನ ಹಾಲು ಉಚ್ಚಿಷ್ಟ ಹಾಕಿಸೊ
ಗಟ್ಯಾಗಿ ಸಕ್ಕರೆ ತುಪ್ಪ ರೊಟ್ಟಿ ಉಣ್ಣಿಸೊ
ಮುಂದೆ ಹುಟ್ಟಿ ಇಹ ಜನ್ಮಂಗಳ ಎನಗೆ ಬಿಡಿಸೊ 

ಕಿಟ್ಟಗಟ್ಟಿದ ಕಬ್ಬಿಣಕ್ಕೆ ಪುಟವ ಹಾಕಿಸೊ
ಉತ್ಕೃಷ್ಟ ಬಂಗಾರದೊಳು ಎನ್ನ ಸೇರಿಸೊ
ಬೆಟ್ಟಿಗೆ ಉಂಗುರ ಮಾಡಿ ಎನ್ನ ಧರಿಸೊ ಸ್ವಾಮಿ
ದಿಟ್ಟ ಪುರಂದರ ವಿಠಲನೆ ದಯದಿ ಪಾಲಿಸೊ 

ಸಾಹಿತ್ಯ: ಪುರಂದರದಾಸರು

Tag: Venkatesha Bedikombe

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ