ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೇ


ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೇ
ಕಣ್ಣಲ್ಲಿ ತುಂಬಿರುವೆ ಮನದಲಿ 
ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೇ
ಆ ಕೆಂಪು ತಾವರೆ ಆ ನೀರಿಗಾದರೆ
ಈ ಹೊನ್ನ ತಾವರೆ ನನ್ನಾಸೆಯಾ ಸೆರೆ

ಮಿಂಚೆಂಬ ಬಳ್ಳಿಗೆ ಮೇಘದ ಆಸರೆ
ಈ ಹೆಣ್ಣ ಬಾಳಿಗೆ ನಿನ್ನ ತೋಳಿನಾಸರೆ
ಓ, ಯುಗಗಳು ಜಾರಿ ಉರುಳಿದರೆನು
ನಾನೆ ನೀನು ನೀನೆ ನಾನು 
ಆದ ಮೇಲೆ ಬೇರೆ ಏನಿದೆ

ರವಿಯನ್ನು ಕಾಣದೆ ಹಗಲೆಂದು ಆಗದು
ನಿನ್ನನ್ನು ನೋಡದೆ, ಈ ಪ್ರಾಣ ನಿಲ್ಲದು
ಕಡಲನ್ನು ಸೇರದ ನದಿಯೆಲ್ಲಿ ಕಾಣುವೆ
ನಿನ್ನನ್ನು ಸೇರದೆ ನಾ ಹೇಗೆ ಬಾಳುವೆ
ಆ, ವಿರಹದ ನೋವ ಮರೆಯಲಿ ಜೀವ
ಹೂವು ಗಂಧ ಸೇರಿದಂತೆ 
ಪ್ರೇಮದಿಂದ ನಿನ್ನ ಸೇರುವೆ

ಚಿತ್ರ: ನಾ ನಿನ್ನಾ ಮರೆಯಲಾರೆ ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್ ಮತ್ತು ನಾಗೇಂದ್ರ
ಗಾಯನ:  ರಾಜ್ ಕುಮಾರ್ ಮತ್ತು ಎಸ್ ಜಾನಕಿ


Tag: Ellelli nodali ninnanne kaanuve, yellelli nodali ninnanne kanuve

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ