ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಕುಲ ಕುಲ ಕುಲವೆಂದು ಹೊಡೆದಾಡದಿರಿ

ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ..


ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ

ಅಟ್ಟು ಉಣ್ಣದ ವಸ್ತುಗಳಿಲ್ಲ
ಗುಟ್ಟು ಕಾಣಿಸೆ ಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕoಡ್ಯಾ ಮನುಜ
ಕುಲ ಕುಲ ಕುಲವೆಂದು ಹೊಡೆದಾಡದಿರಿ



ಜಲವೆ ಸಕಲ ಕುಲಕ್ಕೆ ತಾಯಲ್ಲವೆ

ಜಲದ ಕುಲವನೇನಾದರೂ ಬಲ್ಲಿರಾ
ಜಲಜದ ಗುಳಿಯಂತೆ ಸ್ಥಿರವಲ್ಲ ಈ ದೇಹ
ನೆಲೆಯ ಅರಿತು ನೀ ನೆನೆಕoಡ್ಯಾ ಮನುಜ
ಕುಲ ಕುಲ ಕುಲವೆಂದು ಹೊಡೆದಾಡದಿರಿ



ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ

ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿ ಕೇಶವರಾಯನ
ಚರಣ ಕಮಲವ ಕೀರ್ತಿಸುವನೇ ಕುಲಜ
ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ
ಕುಲ ಕುಲ ಕುಲವೆಂದು ಹೊಡೆದಾಡದಿರಿ



ಚಿತ್ರ: ಭಕ್ತ ಕನಕದಾಸ
ಸಾಹಿತ್ಯ: ಶ್ರೀಕನಕದಾಸರು
ಸಂಗೀತ: ಎಂ. ವೆಂಕಟರಾಜು
ಗಾಯನ: ಪಿ. ಬಿ. ಶ್ರೀನಿವಾಸ್


Tag: Kula Kula kulavendu hodedadadiri

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ