ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಸದಾ ಕಣ್ಣಲೇ ಪ್ರಣಯದಾ ಕವಿತೆ ಹಾಡುವೆ

ಸದಾ ಕಣ್ಣಲೇ ಪ್ರಣಯದಾ ಕವಿತೆ ಹಾಡುವೆ
ಸದಾ ನನ್ನಲಿ ಒಲವಿನಾ ಬಯಕೆ ತುಂಬುವೇ

ಕಣ್ಣೆರಡು ಕಮಲಗಳಂತೆ ಮುಂಗುರುಳು ದುಂಬಿಗಳಂತೆ
ನಾಸಿಕವು ಸಂಪಿಗೆಯಂತೆ ನೀ ನಗಲು ಹೂ ಬಿರಿದಂತೆ 
ನಡೆಯುತಿರೆ ನಾಟ್ಯದಂತೇ,
ನಡೆಯುತಿರೆ ನಾಟ್ಯದಂತೇ, ರತಿಯೇ ಧರೆಗಿಳಿದಂತೆ
ಈ ಅಂದಕೆ ಸೋತೆನು ಸೋತೆ ನಾನೂ
ಸದಾ ಕಣ್ಣಲೀ ಪ್ರಣಯದಾ ಕವಿತೆ ಹಾಡುವೆ

ಗುಡುಗುಗಳು ತಾಳದಂತೇ ಮಿಂಚುಗಳು ಮೇಳದಂತೆ
ಸುರಿವಾ ಮಳೆ ನೀರೆಲ್ಲಾ ಪನ್ನೀರ ಹನಿಹನಿಯಂತೇ
ಜೊತೆಯಾಗಿ ನೀನಿರೆ ಸಾಕು ಭೂಲೋಕ ಸ್ವರ್ಗದಂತೆ
ಈ ಪ್ರೇಮಕೆ ಸೋತೆನು, ಸೋತೆ ನಾನೂ
ಸದಾ ಕಣ್ಣಲ್ಲೇ ಪ್ರಣಯದಾ ಕವಿತೆ ಹಾಡುವೆ
ಸದಾ ನನ್ನಲಿ ಒಲವಿನಾ ಬಯಕೆ ತುಂಬುವೇ

ಚಿತ್ರ: ಕವಿರತ್ನ ಕಾಳಿದಾಸ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಎಂ. ರಂಗರಾವ್
ಗಾಯನ: ರಾಜ್ ಕುಮಾರ್ ಮತ್ತು ವಾಣಿ ಜಯರಾಂ

Tag: Sada Kannale Pranayada kavite haduve

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ