ಅಂತರಂಗದ ಕದವು ತೆರೆಯಿತಿಂದು
ಅಂತರಂಗದ ಕದವು ತೆರೆಯಿತಿಂದು
ಎಂತು ಪುಣ್ಯದ ಫಲವು ಪ್ರಾಪ್ತಿಯಾಯಿತು
ಎನಗೆ
ಏಸುದಿನವಾಯಿತೊ ಬೀಗಮುದ್ರೆಯ ಮಾಡಿ
ವಾಸವಾಗಿದ್ದರೋ ದುರುಳರಿಲ್ಲಿ
ಮೋಸವಾಯಿತು ಇಂದಿನ ತನಕ ತಮಸಿನ
ರಾಶಿಯೊಳಗೆ ಹೂಳಿ ಕಾಣಿಸುತ್ತಿರಲಿಲ್ಲ
ಹರಿಕರುಣವೆಂಬಂಥ ಕೀಲಿಕೈ ದೊರಕಿತು
ಗುರುಕರುಣವೆಂಬಂಥ ಶಕ್ತಿಯಿಂದ
ಪರಮಭಾಗವತರ ಸಹವಾಸದಲಿ ಪೋಗಿ
ಹರಿಸ್ಮರಣೆಯಿಂದಲಿ ಬೀಗಮುದ್ರೆಯ ತೆಗೆದೆ
ಸುತ್ತಲಿದ್ದವರು ಪಲಾಯನವಾದರು
ಭಕ್ತಿಕಕ್ಕಡವೆಂಬ ಜ್ಞಾನದೀಪ
ಜತ್ತಾಗಿ ಹಿಡಕೊಂಡು ದ್ವಾರದೊಳಗೆ
ಪೊಕ್ಕೆ
ಎತ್ತನೋಡಿದರತ್ತ ಶೃಂಗಾರ ಸದನ
ಹೊರಗೆ ದ್ವಾರವು ನಾಲ್ಕು ಒಳಗೈದು
ದ್ವಾರಗಳು
ಪರ ದಾರಿಗೆ ಪ್ರಾಣ ಜಯವಿಜಯರು
ಮಿರುಗುವ ಮಧ್ಯಮಂಟಪ ಕೋಟಿರವಿಯಂತೆ
ಸರಸಿಜನಾಭನ ಅರಮನೆಯ ಸೊಬಗು
ಸ್ವಮೂರ್ತಿಗಣ ಮಧ್ಯ ಸಚ್ಚಿದಾನಂದೈಕ
ರಮೆಧರೆಯರಿಂದಲಾಲಿಂಗತ್ವದಿ
ಕಮಲಜಾದಿಗಳಿಂದ ಸ್ತುತಿಸಿಕೊಳ್ಳುತ ಹೃದಯ-
ಕಮಲದೊಳಗಿರುವ ಶ್ರೀ ವಿಜಯವಿಠಲನ ಕಂಡೆ
ಸಾಹಿತ್ಯ: ವಿಜಯದಾಸರು
ಕಾಮೆಂಟ್‌ಗಳು