ತಲ್ಲಣಿಸದಿರು ಕಂಡ್ಯ
ತಲ್ಲಣಿಸದಿರು ಕಂಡ್ಯ ತಾಳು ಮನವೆ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ
ಬೆಟ್ಟದ ತುದಿಯಲ್ಲಿ ಹುಟ್ಟಿರುವ
ವೃಕ್ಷಕ್ಕೆ
ಕಟ್ಟೆಯನ್ನು ಕಟ್ಟಿ ನೀರೆರೆದವರು ಯಾರೊ
ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾದ
ಮೇಲೆ
ಗಟ್ಯಾಗಿ ಸಲಹುವನು ಇದಕೆ ಸಂಶಯ ಬೇಡ
ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲ
ಅಡಿಗಡಿಗಡಿಗೆ ಆಹಾರವಿತ್ತವರು ಯಾರೊ
ಹಡೆದ ಜನನಿಯ ತೆರದಿ ಸ್ವಾಮಿ
ಹೊಣೆಗೀಡಾಗಿ
ಬಿಡದೆ ರಕ್ಷಿಪನಿದಕೆ ಸಂದೇಹ ಬೇಡ
ಕಲ್ಲೊಳಗೆ ಹುಟ್ಟಿ ಕೂಗುವ
ಕಪ್ಪೆಗಳಿಗೆಲ್ಲ
ಅಲ್ಲಲ್ಲಿಗೆ ಆಹಾರವಿತ್ತವರು ಯಾರೊ
ಬಲ್ಲಿದನು ಕಾಗಿನೆಲೆಯಾದಿಕೇಶವರಾಯ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ
ಸಾಹಿತ್ಯ: ಕನಕದಾಸರು
ಗಾಯನ: ಜಯವಂತಿದೇವಿ ಹಿರೇಬೆಟ್
http://www.youtube.com/watch?v=2yIFCg2sMiI
ಕಾಮೆಂಟ್‌ಗಳು