ತುಂಗಾತೀರದಿ ನಿಂತ ಸುಯತಿವರನ್ಯಾರೆ ಪೇಳಮ್ಮ
ತುಂಗಾತೀರದಿ ನಿಂತ ಸುಯತಿವರನ್ಯಾರೆ ಪೇಳಮ್ಮ
ಸಂಗೀತಪ್ರಿಯ ಮಂಗಳ ಸುಗಣತರಂಗ ಮುನಿಕುಲೋತ್ತುಂಗ ಕಣಮ್ಮ
ಚೆಲುವ ಸುಮುಖ ಫಣೆಯಲ್ಲಿ ತಿಲಕ ನಾಮಗಳು ನೋಡಮ್ಮ
ಜಲಜಮಣಿಯ ಕೊರಳಲ್ಲಿ ತುಳಸಿಮಾಲೆಗಳು ಪೇಳಮ್ಮ
ಸುಲಲಿತ ಕಮಂಡಲು ದಂಡವನೆ ಧರಿಸಿಹನೆ ನೋಡಮ್ಮ
ಕ್ಷುಲ್ಲ ಹಿರಣ್ಯಕನಲ್ಲಿ ಜನಿಸಿದ ಪ್ರಹ್ಲಾದನು ತಾನಿಲ್ಲಿಹನಮ್ಮ
ಸುಂದರ ಚರಣಾರವಿಂದಕೆ ಭಕುತಿಯಲಿಂದ ನೋಡಮ್ಮ
ವಂದಿಸಿ ಸ್ತುತಿಸುವ ಭೂಸುರವೃಂದ ನೋಡಮ್ಮ
ಚಂದದಲಂಕೃತಿಯಿಂದ ಶೋಭಿಸುವಾನಂದ ನೋಡಮ್ಮ
ಹಿಂದೆ ವ್ಯಾಸಮುನಿಯೆಂದೆನಿಸಿದ ಕರ್ಮಂದಿಗಳರಸಘದಿಂದ ರಹಿತನೆ
ಅಭಿನವ ಜನಾರ್ಧನ ವಿಠಲನ ಧ್ಯಾನಿಸುವ ನೋಡಮ್ಮ
ಅಭಿವಂದಿಸಿದವರಿಗೆ ಅಖಿಲಾರ್ಥವ ಸಲ್ಲಿಸುವ ನೋಡಮ್ಮ
ನಭಮಣಿಯಂದದಿ ವಿವಿಧದಿ ಶೋಭಿಸುವ ನೋಡಮ್ಮ
ಶುಭಗುಣಗಣನಿಧಿ ರಾಘವೇಂದ್ರ ಗುರು ಅಬುಜಭವಾಂಡದಿ ಪ್ರಬಲ ಕಾಣಮ್ಮ
ಸಾಹಿತ್ಯ: ಜಗನ್ನಾಥ ದಾಸರು
ಚಿತ್ರ: ಬೆಂಗಳೂರು ಜಯನಗರ 5ನೇ ಬ್ಲಾಕಿನಲ್ಲಿರುವ
ಶ್ರೀರಾಘವೇಂದ್ರ ಸ್ವಾಮಿ ಮಠ
Tag: Tunga teeradi ninda suyativara
ಕಾಮೆಂಟ್‌ಗಳು