ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಎದೆ ತುಂಬಿ ಹಾಡಿದೆನು


 ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು.
ಇಂದು ನಾ ಹಾಡಿದರು ಅಂದಿನಂತೆಯೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡುಹಕ್ಕಿಗೆ ಬೇಕೆ ಬಿರುದು ಸನ್ಮಾನ ?


ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ.
ಕೇಳುವವರಿಹರೆಂದು ನಾಬಲ್ಲೆನದರಿಂದ
ಹಾಡುವೆನು ಮೈದುಂಬಿ ಎಂದಿನಂತೆ.
ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ.

ಕವಿತೆ: ತೃಪ್ತಿ 
ಸಾಹಿತ್ಯ : ಜಿ.ಎಸ್.ಶಿವರುದ್ರಪ್ಪ

(ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪನವರು ತಮ್ಮ ಗುರುಗಳೂ ಮತ್ತು ಆಪ್ತರೂ ಆದ ತ.ಸು ಶಾಮರಾಯರ ಮೇಲಣ ಗೌರವದಿಂದ ಈ ಪದ್ಯ ಬರೆದರು ಎಂದು ಕೇಳಿದ ನೆನಪು.)


ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ