ಬಂಕಿಮ ಚಂದ್ರ
ಬಂಕಿಮ ಚಂದ್ರ ಚಟ್ಟೋಪಾಧ್ಯಾಯ
ನಮ್ಮ ಭಾರತೀಯರಿಗೆ ‘ವಂದೇ ಮಾತರಂ’ ಅಂತಹ ದೇಶಭಕ್ತಿಗೀತೆಗಳನ್ನು ನೀಡಿ, ಹತ್ತೊಂಬತ್ತನೇ ಶತಮಾನದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು ಭಾರತೀಯರಲ್ಲಿ ತಮ್ಮ ಮೊನಚು ಬರಹ, ಹಾಡುಗಳ ಮುಖಾಂತರ ಕಿಚ್ಚು ತುಂಬಿದವರು ಬಂಗಾಳಿ ಕವಿ, ಕಾದಂಬರಿಕಾರ, ಪತ್ರಕರ್ತ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ(1838-1894). ಬ್ರಿಟಿಷರು ಅವರನ್ನು ಚಟರ್ಜಿ ಅಂದು ಕರೆಯುತ್ತಿದ್ದರು.
ಬಂಕಿಮ ಚಂದ್ರ ಚಟ್ಟೋಪಾಧ್ಯಾಯರು 1838ರ ಜೂನ್ 27ರಂದು ನೈಹತಿಯಲ್ಲಿರುವ ಕಂಥಾಲಪಾರ ಎಂಬ ಹಳ್ಳಿಯಲ್ಲಿ ಜನಿಸಿದರು. 1857ರಲ್ಲಿ ಕಲ್ಕತ್ತಾ ವಿಶ್ವವಿದ್ಯಾಲಯದ ಮೊದಲ ಇಬ್ಬರು ಪದವೀಧರರ ಪೈಕಿ ಅವರು ಒಬ್ಬರಾಗಿದ್ದರು. 1869ರಲ್ಲಿ ಒಂದು ಕಾನೂನು ಪದವಿಯನ್ನೂ ಗಳಿಸಿದರು. ಮುಂದೆ ತಮ್ಮ ತಂದೆಯ ರೀತಿಯಲ್ಲಿಯೇ ಜೆಸ್ಸೋರ್‌ನ ಉಪ-ಜಿಲ್ಲಾಧಿಕಾರಿಯಾಗಿ ನೇಮಿಸಲ್ಪಟ್ಟರು; ಓರ್ವ ಉಪ-ನ್ಯಾಯಾಧಿಪತಿಯ ಹುದ್ದೆಗೇರಿದ ಚಟರ್ಜಿಯವರು 1891ರಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದರು. ಆಡಳಿತ ನಡೆಸುತ್ತಿದ್ದ ಬ್ರಿಟಿಷರೊಂದಿಗೆ ಘರ್ಷಣೆಗೆ ಇಳಿಯಲು ಕಾರಣವಾಗುವಂಥ ಘಟನೆಗಳು ಅವರ ಈ ಸೇವೆಯ ವರ್ಷಗಳಲ್ಲಿ ದಟ್ಟವಾಗಿ ತುಂಬಿಕೊಂಡಿದ್ದವು.
ಭಾರತದ ಸಾಹಿತ್ಯಿಕ ಪುನರುದಯದಲ್ಲಿನ ಓರ್ವ ಪ್ರಮುಖ ವ್ಯಕ್ತಿಯಾಗಿ ಚಟರ್ಜಿಯವರನ್ನು ವ್ಯಾಪಕವಾಗಿ ಪರಿಗಣಿಸಲಾಗುತ್ತದೆ. ಕಾದಂಬರಿಗಳು, ಪ್ರಬಂಧಗಳು ಮತ್ತು ವ್ಯಾಖ್ಯಾನಗಳನ್ನು ಒಳಗೊಂಡಂತಿರುವ ಅವರ ಕೆಲವೊಂದು ಬರಹಗಳು ಸಾಂಪ್ರದಾಯಿಕವಾದ ಛಂದೋಬದ್ಧ ಪದ್ಯ-ಉದ್ದೇಶಿತ ಭಾರತೀಯ ಬರಹಗಳಿಗಿಂತ ವಿಭಿನ್ನವಾದ ಒಂದು ಹೊರಳುದಾರಿಯನ್ನು ತುಳಿದವು, ಮತ್ತು ಭಾರತದ ಉದ್ದಗಲಕ್ಕೂ ಇರುವ ಲೇಖಕರಿಗೆ ಸಂಬಂಧಿಸಿದಂತೆ ಒಂದು ಪ್ರೇರಣೆಯನ್ನು ಒದಗಿಸಿದವು.
ದುರ್ಗೇಶ್‌ನಂದಿನಿ, ಕಪಾಲಕುಂಡಲ, ಮೃಣಾಲಿನಿ, ವಿಷಬೃಕ್ಷ , ಇಂದಿರಾ, ಜುಗಲನ್‌ಗುರಿಯಾ, ರಾಧಾರಾಣಿ, ಚಂದ್ರಶೇಖರ್, ಕಮಲಾಕಾಂತೆರ್ ದಪ್ತರ್ , ರಜನಿ, ಕೃಷ್ಣಾಕಾಂತೆರ್ ಉಯಿಲ್, ರಾಜಸಿಂಹ, ಆನಂದಮಠ, ದೇವಿ ಚೌಧುರಾನ, ಕಮಲಾಕಾಂ, ಸೀತಾರಾಮ್, ಮೂಚಿರಾಮ್ ಗುರೆರ್ ಜೀವನ್‌ಚರಿತಾ ಮುಂತಾದವು ಬಂಕಿಮ ಚಂದ್ರರ ಕಾದಂಬರಿಗಳು.
ಬಂಕಿಮ ಚಂದ್ರ ಧಾರ್ಮಿಕ ವ್ಯಾಖ್ಯಾನಗಳಲ್ಲಿ ಕೃಷ್ಣ ಚರಿತ್ರ, ಧರ್ಮತತ್ವ, ದೇವತತ್ತ್ವ, ಶ್ರೀಮದ್ವಗವತ್ ಗೀತಾ , ಭಗವದ್ಗೀತಾದ ಮೇಲಿನ ಒಂದು ವ್ಯಾಖ್ಯಾನ ಪ್ರಸಿದ್ಧವೆನಿಸಿವೆ. ಲಲಿತಾ ಓ ಮಾನಸ್ ಅವರ ಕವನ ಸಂಗ್ರಹ. ಲೋಕ್ ರಹಸ್ಯ, ಬಿಜ್ಞಾನ್ ರಹಸ್ಯ, ಬಿಚಿತ್ರ ಪ್ರಬಂಧ , ಸಮ್ಯಾ ಮುಂತಾದವು ಪ್ರಬಂಧಸಂಗ್ರಹಗಳು. ಬಂಕಿಮ ಚಂದ್ರರ ಈ ಎಲ್ಲ ಕೃತಿಗಳೂ ಇಂಗ್ಲಿಷ್ ಭಾಷೆ ಸೇರಿದಂತೆ ಇತರ ಭಾಷೆಗಳಲ್ಲಿ ಮೂಡಿಬಂದಿವೆ.
'ಆನಂದಮಠ' ಕಾದಂಬರಿಯಲ್ಲಿ ಬರೆದ 'ಓ ತಾಯಿ, ಭಾರತಿಯೇ, ನಿನಗೆ ನಮನ' ಎಂದು ಸಾರುವ 'ವಂದೇ ಮಾತರಂ' ಭಾರತೀಯರಿಗೆ ಪವಿತ್ರ ಗೀತೆಯಂತಿದೆ. ಈ ಗೀತೆಗೆ ರವೀಂದ್ರನಾಥ ಠಾಗೂರರು ಸಂಗೀತ ಸಂಯೋಜಿಸಿರು.
ಬಂಕಿಮ ಚಂದ್ರರು 1894ರ ಏಪ್ರಿಲ್ 8ರಂದು ಈ ಲೋಕವನ್ನಗಲಿದರು.
On the birth anniversary of Bankim Chandra Chattopadhyay
ಕಾಮೆಂಟ್‌ಗಳು