ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಬುದ್ಧ



 ಬುದ್ಧನ ಖಾಸಾ ಯಾರೆಂಬಿರಿ, ನಾನೆ ನಾನು!
‘ಬುದ್ಧಂ ಶರಣಂ ಗಚ್ಛಾಮಿ, ಧರ್ಮಂ ಶರಣಂ ಗಚ್ಛಾಮಿ’,
ಎಂದು ವರಲಿ ನಡೆದರಲ್ಲ ಅವನ ಮುಂದಾಳೆ ನಾನು;
ಹುಟ್ಟಿಗಿಂತ ಮುನ್ನವೇ ರಾಜತ್ವವ ಬಿಟ್ಟವನು,
ಬೋಧಿವೃಕ್ಷದಡಿಯೆ ಒಮ್ಮೆ ಮೂಗು ಮುಚ್ಚಿ ನೆಟ್ಟವನು,
ನಾನು ಕೂಡ ಹೆಂಡತಿ ಮಕ್ಕಳನು ಬಿಟ್ಟುಕೊಟ್ಟವನು,
ಅವನ ಹಾಗೆ-
ಅವನೊ ಬುದ್ಧ ಸಿದ್ಧ ಜಗತ್ಪ್ರಸಿದ್ಧನಾಗಿ ಎದ್ದಿದ್ದ;
ಅವನ ಮುಖದ ಕಾಂತಿಯೇನು, ಉಗುವ ಆ ಪ್ರಶಾಂತಿಯೇನು!
ಕೆಂಡದ ಬಳಿ ಇದ್ದು ಕೂಡ ಈ ಇದ್ದಲು ಇತ್ತು ಹಾಗೆ-
ಆಗ ಈಗಿನಂತೆಯೇ ಹೊತ್ತದೇ ಉರಿಯದೆ.

- ಗೋಪಾಲಕೃಷ್ಣ ಅಡಿಗರ 'ನನ್ನ ಅವತಾರ' ಕವಿತೆಯಿಂದ

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ