ಸುಬ್ರಹ್ಮಣ್ಯ ಧಾರೇಶ್ವರ
ಸುಬ್ರಹ್ಮಣ್ಯ ಧಾರೇಶ್ವರ ನಿಧನ
ಸುಬ್ರಹ್ಮಣ್ಯ ಧಾರೇಶ್ವರ ಅವರು ಬಡಗುತಿಟ್ಟು ಯಕ್ಷಗಾನದ ಕಂಚಿನ ಕಂಠದ ಭಾಗವತರಾಗಿ ಹೆಸರಾಗಿದ್ದರು.
ಸುಬ್ರಹ್ಮಣ್ಯ ಧಾರೇಶ್ವರ ಅವರು 1957 ರಲ್ಲಿ ಗೋಕರ್ಣದಲ್ಲಿ ಜನಿಸಿದರು. ಮುಂದೆ ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ನಿವಾಸಿಯಾಗಿದ್ದರು. ಸಂಗೀತಾಭ್ಯಾಸ ಮಾಡಿ ಕಾರ್ಯಕ್ರಮ ನೀಡುತ್ತಿದ್ದರು.
ಸುಬ್ರಹ್ಮಣ್ಯ ಧಾರೇಶ್ವರ ಅವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು.
ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳಗಳಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು.
ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು. ಧಾರೇಶ್ವರ ಯಕ್ಷ ಬಳಗದ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು
ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು.
ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರದಾಗಿತ್ತು.
ಸುಬ್ರಹ್ಮಣ್ಯ ಧಾರೇಶ್ವರ ಅವರು 2024ರ ಏಪ್ರಿಲ್ 25ರಂದು ತಮ್ಮ67ನೇ ವಯಸ್ಸಿನಲ್ಲಿ ನಿಧನರಾದರು. 🌷🙏🌷
Great Yakshagana Artiste Subrahmanya Dhareshwar 🌷🙏🌷
ಕಾಮೆಂಟ್‌ಗಳು