ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಅಂಬೆಗಾಲಿಕ್ಕುತಲಿ


 ಅಂಬೆಗಾಲಿಕ್ಕುತಲಿ ಬಂದ ಗೋವಿಂದ
ಅಂಬುಜನಾಭ ದಯದಿಂದ ಎನ್ನ ಮನೆಗೆ 


ಜಲಚರ ಜಲವಾಸ ಧರಣಿಧರ ಮೃಗರೂಪ
ನೆಲನಳೆದು ಮೂರಡಿ ಮಾಡಿಬಂದ ಕುಲನಾಶ
ವನವಾಸ ನವನೀತಚೋರನಿವ ಲಲನೆಯರ
ವ್ರತಭಂಗ ವಾಹನ ತುರಂಗ 

ಕಣ್ಣು ಬಿಡುವನು ತನ್ನ ಬೆನ್ನ ತಗ್ಗಿಸುವನು
ಮಣ್ಣು ಕೆದರಿ ಕೋರೆ ಬಾಯಿ ತೆರೆದು
ಚಿಣ್ಣ ಭಾರ್ಗವ ಲಕ್ಷ್ಮಣನಣ್ಣ ಬೆಣ್ಣೆ ಕಳ್ಳ
ಮಾನವ ಬಿಟ್ಟು ಕುದುರೆಯನೇರಿದ !!

ನೀರ ಪೊಕ್ಕನು ಗಿರಿಯ ನೆಗಹಿ ಧರಣಿಯ ತಂದು
ನರಮೃಗ ಬಲಿಬಂಧ ಕೊರಳುಗೊಯಿಕ ಶೂರ
ಮುರಿದೊರಳೆಳೆದು ನಿರವಾಣಿ ಹಯಹತ್ತಿ
ಪುರಂದರ ವಿಠಲ ಮನೆಗೆ ತಾ ಬಂದ ಚರಣ 

ಸಾಹಿತ್ಯ: ಪುರಂದರದಾಸರು

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ